ಮುಂಬೈ: 5.93 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಕಳ್ಳತನ ಮಾಡಿದ ಆರೋಪದಲ್ಲಿ ತಂದೆ-ಮಗನ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಥಾಣೆ ಜಿಲ್ಲೆಯ ಮುರ್ಬಾದ್ ಪ್ರದೇಶದಲ್ಲಿ ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್(MSEDCL) ತಂಡವು ಮೇ 5 ರಂದು ಫಲೇಗಾಂವ್‍ನಲ್ಲಿ ಕಲ್ಲು ಪುಡಿ ಮಾಡುವ ಘಟಕದ ಮೇಲೆ ದಾಳಿ ನಡೆಸಿದ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಇಬ್ಬರಿಗೂ ಮುಸ್ಲಿಮರೇ ಬೇಕು: ಪ್ರತಾಪ್ ಸಿಂಹ
ಕಳೆದ 29 ತಿಂಗಳಲ್ಲಿ ಒಟ್ಟು 5.93 ಕೋಟಿ ಮೌಲ್ಯದ 34,09,901 ಯೂನಿಟ್ ವಿದ್ಯುತ್ ಕಳ್ಳತನವಾಗಿದೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ್ದಾರೆ. ಪರಿಣಾಮ ಪೊಲೀಸರಿಗೆ ಈ ಕುರಿತು ತನಿಖೆ ಮಾಡಲು ಆದೇಶ ಕೊಡಲಾಗಿದೆ. ಈ ಹಿನ್ನೆಲೆ ಪೊಲೀಸರು ಆರೋಪಿಗಳಿಗಾಗಿ ಜಾಲ ಬೀಸಿದ್ದು, ಅಪ್ಪ-ಮಗ ಸಿಕ್ಕಿ ಬಿದ್ದಿದ್ದಾರೆ.
ಕಲ್ಯಾಣ್ ತಾಲೂಕಿನ ಫಾಲೇಗಾಂವ್ ಗ್ರಾಮದ ನಿವಾಸಿಗಳಾದ ಚಂದ್ರಕಾಂತ್ ಭಾಂಬ್ರೆ, ಅವರ ಪುತ್ರ ಸಚಿನ್ ಭಾಂಬ್ರೆ ಮತ್ತು ಅವರ ಚಾಲಕನ ವಿರುದ್ಧ ಮುರ್ಬಾದ್ ಪೊಲೀಸ್ ಠಾಣೆಯಲ್ಲಿ ವಿದ್ಯುತ್ ಕಳ್ಳತನ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ವಿದ್ಯುತ್ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುರ್ಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು 8ನೇ ಮಹಡಿಯಲ್ಲಿ ನೇತಾಡುತ್ತಿದ್ದ ಮಗು ರಕ್ಷಿಸಿದ – ನೆಟ್ಟಿಗರಿಂದ ಮೆಚ್ಚುಗೆಯ ಸುರಿಮಳೆ
ತನಿಖೆಯಲ್ಲಿ ತಿಳಿದಿದ್ದೇನು?
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ವಿದ್ಯುತ್ ಮೀಟರ್ ಟ್ಯಾಂಪರಿಂಗ್ ಮಾಡಿದ್ದಾರೆ. ವಿದ್ಯುತ್ ಬಳಕೆಯ ದಾಖಲೆಗಳು ಅನುಮಾನಾಸ್ಪದವಾಗಿವೆ. ಆದ್ದರಿಂದ ಮೀಟರ್ ವಶಪಡಿಸಿಕೊಳ್ಳಲಾಗಿದ್ದು, ಅದನ್ನು ಪ್ರಯೋಗಾಲಯದಲ್ಲಿ ಸಂಪೂರ್ಣ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ವೇಳೆ ಮೀಟರ್‌ಗೆ ಕಪ್ಪು ಅಂಟುಗಳನ್ನು ಸುತ್ತುವ ಮೂಲಕ ರಿಮೋಟ್ ಕಂಟ್ರೋಲ್ ಸರ್ಕ್ಯೂಟ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ರಿಮೋಟ್ ಕಂಟ್ರೋಲ್ ಸಹಾಯದಿಂದ ಸರ್ಕ್ಯೂಟ್ ನಿಯಂತ್ರಿಸಿ ಅಪ್ಪ-ಮಗ ವಿದ್ಯುತ್ ಕಳ್ಳತನ ಮಾಡುತ್ತಿದ್ದರು ಎಂದು ತಾಂತ್ರಿಕ ವಿಶ್ಲೇಷಣೆ ತಿಳಿಸಿದೆ.