ಕೊಲಂಬೊ: ಈಗಾಗಲೇ ಆರ್ಥಿಕ ಬಿಕ್ಕಟ್ಟು, ಇಂಧನ ಕೊರತೆ ಹಾಗೂ ನಿರುದ್ಯೋಗ ಸಮಸ್ಯೆಯ ವಿರುದ್ಧ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ನಾಗರಿಕರು ದಂಗೆ ಎದ್ದಿದ್ದಾರೆ. ಈ ನಡುವೆಯೂ ಶ್ರೀಲಂಕಾದಲ್ಲಿ LTTE ಭಯೋತ್ಪಾದಕ ಸಂಘಟನೆ ಸದ್ಯದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಜನರ ನಿದ್ದೆಗೆಡಿಸಿದೆ.
3 ದಶಕಗಳ ಕಾಲ ಶ್ರೀಲಂಕಾದಲ್ಲಿ ನಾಗರಿಕ ಯುದ್ಧ ನಡೆಸಿ, 2009ರಲ್ಲಿ ನಿಷ್ಕ್ರಿಯಗೊಂಡ ಎಲ್‌ಟಿಟಿಇ ಮೇ 18ರಂದು ನಡೆಯುವ ಮುಲ್ಲಿವೈಕಲ್ ದಿನಾಚರಣೆ ವೇಳೆ ದಾಳಿ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಶ್ರೀಲಂಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಷ ಈ ಹಿಂದೆ ಎಲ್‌ಟಿಟಿಇಯನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ವಿರುದ್ಧ ಸೇಡಿಗೆ ಎಲ್‌ಟಿಟಿಇ ಮುಂದಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರ, ಭಾರತದ ಗುಪ್ತಚರ ಸಂಸ್ಥೆಗಳ ಬಳಿ ಹೆಚ್ಚಿನ ಮಾಹಿತಿ ಕೇಳಿದೆ. ಜೊತೆಗೆ ಭದ್ರತೆ ಬಿಗಿಗೊಳಿಸಿ ಎಲ್‌ಟಿಟಿಇ ಚಟುವಟಿಕೆಗಳು ಪುನಾರಂಭಗೊಂಡಿವೆಯೇ ಎಂದು ತನಿಖೆ ಆರಂಭಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
12 shipments and more than 400,000 MT of fuel!! Latest consignment of #Diesel from #India under the credit line for fuel was delivered in #Colombo by Torm Helvig today. pic.twitter.com/E25xIGbQCA
— India in Sri Lanka (@IndiainSL) May 15, 2022
ಮುಂದುವರಿದ ನೆರವಿನ ಹಸ್ತ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಂಘರ್ಷ ಪೀಡಿತವಾಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಭಾರತದಿಂದ ನೆರವಿನ ಹಸ್ತ ಮುಂದುವರೆದಿದ್ದು, ಮತ್ತೆ 4 ಲಕ್ಷ ಮೆಟ್ರಿಕ್ ಟನ್ ಇಂಧನವನ್ನು ರವಾನೆ ಮಾಡಿದೆ. ಇದನ್ನೂ ಓದಿ: ಥಾಮಸ್ ಕಪ್ ಬ್ಯಾಡ್ಮಿಂಟನ್ – ಭಾರತ ಚಾಂಪಿಯನ್, ಇತಿಹಾಸ ಸೃಷ್ಟಿ
ಈ ಕುರಿತು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಶ್ರೀಲಂಕಾಕ್ಕೆ ಇತ್ತೀಚಿನ ಕೊಡುಗೆಯಾಗಿ 4 ಲಕ್ಷ ಮೆಟ್ರಿಕ್ ಟನ್ ಡೀಸೆಲ್ ಅನ್ನು ಭಾರತವು ಕಳುಹಿಸಿಕೊಟ್ಟಿದೆ. ಹಣ ಪಾವತಿಸುವ ಬಗ್ಗೆ ಬ್ಯಾಂಕ್ ಖಾತರಿ ನೀಡಿರುವ (ಲೈನ್ ಆಫ್ ಕ್ರೆಡಿಟ್ ಅಥವಾ ಎಲ್‌ಒಸಿ) ಆಧಾರದಲ್ಲಿ ಇಂಧನ ಕಳುಹಿಸಿಕೊಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದೆ.
ಅಂತೆಯೇ ಪ್ರಜಾಸತ್ತಾತ್ಮಕವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ. ದ್ವೀಪ ರಾಷ್ಟ್ರದ ಜನರಿಗೆ ಭಾರತದ ಕಾಳಜಿ ಮತ್ತು ಬದ್ಧತೆ ಮುಂದುವರಿಯುತ್ತದೆ ಎಂದು ಹೇಳಿದೆ.