ಬಸ್‍ನಲ್ಲಿ ಕೊಡೆ ಹಿಡಿದು ಕುಳಿತ ಪ್ರಯಾಣಿಕರು

Public TV
1 Min Read
dharwad bus umbrella

ಧಾರವಾಡ: ರಾಜ್ಯದಲ್ಲೇ ಮಳೆ ಅಬ್ಬರ ಜೋರಾಗಿದ್ದು, ಎಲ್ಲೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸೊರುತಿದ್ದ ಬಸ್‍ನಲ್ಲಿ ಪ್ರಯಾಣಿಕರು ಕೊಡೆ ಹಿಡಿದು ಕುಳಿತ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ನಾಗಲಾವಿ ಗ್ರಾಮಕ್ಕೆ ಹೋಗುವ ಬಸ್‍ನ್ನು ಹತ್ತಿದ ಪ್ರಯಾಣಿಕರು, ಮಳೆ ನೀರಿಗೆ ಹೆದರಿದ್ದಾರೆ. ಯಾಕೆಂದರೆ ಬಸ್ ಸಂಪೂರ್ಣ ಸೊರುತ್ತಿತ್ತು. ಈ ಹಿನ್ನೆಲೆಯಲ್ಲಿ ಬಸ್‍ನಲ್ಲಿದ್ದ ಪ್ರಯಾಣಿಕರೆಲ್ಲರೂ ಛತ್ರಿ ಹಿಡಿದು ಕುಳಿತುಕೊಳ್ಳಬೇಕಾಯಿತು. ಇನ್ನೂ ಬಸ್ ಸೀಟ್‍ಗಳು ಕೂಡ ನೀರಿನಿಂದ ತೊಯ್ದಿದ್ದರಿಂದ ಕೆಲ ಪ್ರಯಾಣಿಕರು ಚಾಲಕನ ಪಕ್ಕದ ಎಂಜಿನ್ ಮೇಲೆ ಕುಳಿತುಕೊಂಡಿದ್ದರು.

dharwad bus umbrella 1

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯು ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಇದನ್ನೂ ಓದಿ: ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

ಮಳೆಯಿಂದಾಗಿ ನಾವಳ್ಳಿ ಅಣ್ಣಿಗೇರಿ ರಸ್ತೆ ಸಂಪರ್ಕ ಕಡಿತವಾಗಿದ್ದುಮ ಹಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳದ ಅಕ್ಕ-ಪಕ್ಕ ಇರುವ ಜನತೆಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಕಂದಾಯ ಅಧಿಕಾರಿಗಳು ಹೊಲಗಳಿಗೆ ಹೋಗದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು

Share This Article
Leave a Comment

Leave a Reply

Your email address will not be published. Required fields are marked *