ಇದು ದುರಹಂಕಾರವಲ್ಲ, ಆತ್ಮವಿಶ್ವಾಸ: ರಾಹುಲ್‌ಗೆ ವಿದೇಶಾಂಗ ಸಚಿವ ತಿರುಗೇಟು

Public TV
1 Min Read
Jaishankar rahul gandhi

ನವದೆಹಲಿ: ಭಾರತೀಯ ವಿದೇಶಾಗ ನೀತಿಯನ್ನು ದುರಹಂಕಾರಿ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿರುಗೇಟು ನೀಡಿದ್ದಾರೆ. ವಿಶ್ವ ವೇದಿಕೆಯಲ್ಲಿ ಭಾರತ ಪ್ರದರ್ಶಿಸುತ್ತಿರುವುದು ದುರಹಂಕಾರವಲ್ಲ, ಆತ್ಮವಿಶ್ವಾಸ ಎಂದು ಹೇಳಿದ್ದಾರೆ.

sಶುಕ್ರವಾರ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನಡೆದ ಇಂಡಿಯಾಸ್ ಫಾರ್ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತಮಾಡಿದ ರಾಹುಲ್ ಗಾಂಧಿ, ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ. ಅಲ್ಲಿನ ಅಧಿಕಾರಿಗಳು ಯಾರ ಮಾತನ್ನೂ ಕೇಳುವುದಿಲ್ಲ. ದುರಹಂಕಾರದಿಂದ ನಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ, ಯಾರ ಮಾತನ್ನೂ ಕೇಳಲ್ಲ: ರಾಹುಲ್ ಗಾಂಧಿ

ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಜೈಶಂಕರ್, ಹೌದು.. ಭಾರತೀಯ ವಿದೇಶಾಂಗ ಸೇವೆ ಬದಲಾಗಿದೆ. ಅವರು ಸರ್ಕಾರದ ಆದೇಶವನ್ನು ಅನುಸರಿಸುತ್ತಾರೆ. ಅವರು ಇತರರ ವಾದಗಳನ್ನೂ ಎದುರಿಸುತ್ತಾರೆ. ಆದರೆ ಅದನ್ನು ದುರಹಂಕಾರ ಎಂದು ಕರೆಯಲಾಗುವುದಿಲ್ಲ. ಅದನ್ನು ಆತ್ಮವಿಶ್ವಾಸ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವುದು ಎಂದು ಕರೆಯಲಾಗುತ್ತದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 14ಕ್ಕೇರಿದ ಸಾವಿನ ಸಂಖ್ಯೆ

jaishankar

ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಜಾಗತಿಕ ಸಮಸ್ಯೆಗಳ ವಿಚಾರದಲ್ಲಿ ಭಾರತದ ಸ್ಥಾನ ಹಾಗೂ ಹಿತಾಸಕ್ತಿಗಳಿಗೆ ಮೊದಲ ಸ್ಥಾನ ನೀಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ರಷ್ಯಾ-ಉಕ್ರೇನ್ ಯುದ್ಧದ ನಡುವೆ ರಷ್ಯಾದಿಂದ ಅಗ್ಗದ ಬೆಲೆಗೆ ಭಾರತ ತೈಲವನ್ನು ಖರೀದಿಸಿತ್ತು. ಆ ಸಂದರ್ಭ ಇತರ ದೇಶಗಳು ಭಾರತವನ್ನು ವಿರೋಧಿಸಿದ್ದವು. ಆಗ ಜೈಶಂಕರ್ ವಿದೇಶಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *