ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಏರಿಳಿತವಾಗುತ್ತಿದೆ. ಇಂದು ಒಟ್ಟು 107 ಪ್ರಕರಣಗಳು ದಾಖಲಾಗಿದ್ದು, ನಿನ್ನೆಗಿಂತ 60 ಪ್ರಕಣಗಳು ಇಳಿಕೆ ಕಂಡಿದೆ.
ನಿನ್ನೆ 167 ಪಾಸಿಟಿವ್ ಕೇಸ್ ದಾಖಲಾಗಿತ್ತು. ಇಂದು 60 ಪ್ರಕರಣಗಳು ಇಳಿಕೆ ಕಂಡಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ 100 ಪ್ರಕರಣಗಳು ವರದಿಯಾಗಿದ್ದು, ಮೈಸೂರಿನಲ್ಲಿ 3, ಬಳ್ಳಾರಿಯಲ್ಲಿ 2, ಚಿತ್ರದುರ್ಗ ಹಾಗೂ ಉಡುಪಿಯಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?
ಇಂದು ಸಹ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. 110 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.09 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,718ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದ್ದು, ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇದನ್ನೂ ಓದಿ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ನಾರಾಯಣ ಗೌಡರಿಗೆ ಕೈ ಪಾಲಿಕೆ ಸದಸ್ಯರಿಂದ ಫುಲ್ ಕ್ಲಾಸ್
ಈವರೆಗೆ ರಾಜ್ಯದಲ್ಲಿ ಒಟ್ಟು 39,50,652 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,08,828 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 56,341 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 9,803 ಸ್ಯಾಂಪಲ್ (ಆರ್‌ಟಿಪಿಸಿಆರ್ 6,899 ಮತ್ತು 2,904 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.