ತನ್ನ ಕಥೆಯನ್ನು ಪಠ್ಯದಿಂದ ಕೈ ಬಿಡಿ: ದೇವನೂರು ಮಹಾದೇವ

Public TV
2 Min Read
devanoor mahadevaa 1

ಬೆಂಗಳೂರು: ಪಠ್ಯ ಪುಸ್ತಕದ ವಿವಾದ ಬೆನ್ನಲ್ಲೇ ಸಾಹಿತಿ ದೇವನೂರು ಮಹಾದೇವ ಅವರು ತನ್ನ ಕಥೆಯನ್ನು ಪಠ್ಯದಿಂದ ಕೈಬಿಡಬೇಕೆಂದು ಪ್ರಕಟಣೆ ನೀಡಿದ್ದಾರೆ.

ಪತ್ರದಲ್ಲಿ ಏನಿದೆ?
ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. 10ನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ-ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.  ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ 

devanoor mahadevaa 2

ಏಕೆಂದರೆ..
(1) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್.ಮೂರ್ತಿರಾವ್, ಪಿ.ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕಥೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

devanoor letter

(2) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ.ಮುರಳಿ ಮನೋಹರ ಜೋಶಿ ಅವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರ್‌ಎಸ್‍ಎಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ. ಇದನ್ನೂ ಓದಿ:  ನಯನತಾರಾಗೆ ಲೋಕಲ್ ಫುಡ್ ತಿನ್ನಿಸಿದ ಭಾವಿಪತಿ ವಿಘ್ನೇಶ್ 

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ-ಮೇಲ್, ಆನ್‍ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *