ಚಂಡೀಗಢ: ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ರಾಜ್ಯದಲ್ಲಿ 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದೆ.
ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಧಾರ್ಮಿಕ ಮತ್ತು ರಾಜಕೀಯ ಮುಖಂಡರಿಗೆ ನೀಡಲಾಗಿದ್ದ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದಿದೆ. ಏಪ್ರಿಲ್‍ನಲ್ಲಿ ಮಾಜಿ ಸಚಿವರು, ಶಾಸಕರು ಸೇರಿದಂತೆ 184 ಜನರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದಿತ್ತು. ಬಳಿಕ ಒಂದು ತಿಂಗಳ ಹಿಂದೆ 122 ಮಾಜಿ ಸಚಿವರು ಮತ್ತು ಶಾಸಕರ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜಿ
ಇದೀಗ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪುತ್ರ ರಾನೀಂದರ್ ಸಿಂಗ್, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಪತ್ನಿ, ಮಾಜಿ ಸಚಿವರಾದ ಮನ್‍ಪ್ರೀತ್ ಸಿಂಗ್ ಬಾದಲ್, ರಾಜ್ ಕುಮಾರ್ ವರ್ಕಾ, ಭರತ್ ಭೂಷಣ್ ಆಶು, ಮಾಜಿ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸೇರಿದಂತೆ ಅವರ ಕುಟುಂಬಸ್ಥರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ. ಸದ್ಯ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಠಾಣೆಗಳಿಗೆ ಮರಳಿದ್ದಾರೆ ಎಂದು ಭಗವತ್ ಮಾನ್ ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಇಡಿ ಕೇಸ್ – ವಿಚಾರಣೆ ಮೇ 31ಕ್ಕೆ ಮುಂದೂಡಿಕೆ