ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

Public TV
2 Min Read
VANDITA SHARMA

ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ 4ನೇ ಮಹಿಳೆಯಾಗಿದ್ದು, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

karnataka govt

ಮಹಿಳೆಯರ ದರ್ಬಾರ್:
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ ರತ್ನ ಪ್ರಭ ಅಲಂಕರಿಸಿದ್ದರು.

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದರು ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ 3 ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

VANDITA SHARMA 1

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆಆರ್ ಮಹಾಲಕ್ಷ್ಮಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ 2022ರ ನವೆಂಬರ್ 30 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *