ಉಡುಪಿಯ ಯುಪಿಸಿಎಲ್‍ಗೆ ಹಸಿರುಪೀಠ ಚಾಟಿ – ಅವಾಂತರಕ್ಕೆ 52 ಕೋಟಿ ರೂ. ದಂಡ

Public TV
2 Min Read
UDUPI UPCL 2

ಉಡುಪಿ: ಪಡುಬಿದ್ರೆಯ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ಕಳೆದ ಒಂದು ದಶಕಗಳಲ್ಲಿ ಸಾವಿರಾರು ಕೋಟಿ ರೂಪಾಯಿಯ ಸಮಸ್ಯೆ ತಂದೊಡ್ಡಿದೆ.

UDUPI UPCL

ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರೀಯ ಹಸಿರು ಪೀಠ (NGT) ಬರೋಬ್ಬರಿ 52 ಕೋಟಿ ರೂಪಾಯಿ ದಂಡ ವಿಧಿಸಿದೆ. ಯುಪಿಸಿಎಲ್‍ನಿಂದ ಆಗಿರುವ ಮತ್ತು ಆಗುತ್ತಿರುವ ಅನಾಹುತಕ್ಕೆ ಸಂಬಂಧಪಟ್ಟಂತೆ ನಂದಿಕೂರು ಜನಜಾಗೃತಿ ಸಮಿತಿಯು 2005ರಲ್ಲಿ ಈ ಕುರಿತು ರಾಷ್ಟ್ರೀಯ ಹಸಿರು ಪೀಠದಲ್ಲಿ ದಾವೆ ಹೂಡಿತ್ತು. ವಿಶೇಷ ತಂಡಗಳ ಮೂಲಕ ಅಧ್ಯಯನ ನಡೆಸಿದ ಪೀಠವು, ಮೇ 31ರಂದು ಯುಪಿಸಿಎಲ್‍ಗೆ 52 ಕೋಟಿ ರೂ. ದಂಡ ವಿಧಿಸಿದೆ. ಪರಿಸರ ಕಾಳಜಿಯನ್ನು ಮರೆತಿರುವ ಕಂಪನಿ ವಿರುದ್ಧ ಕೋರ್ಟ್ ಚಾಟಿ ಬೀಸಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿರ್ಬಂಧ

NGT

ಕಾಪು ತಾಲೂಕು ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದಲ್ಲಿ ಕಳೆದ ಒಂದೂವರೆ ದಶಕದಿಂದ ಸಕ್ರಿಯವಾಗಿರುವ, ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ಕಾರ್ಯಾಚರಿಸುತ್ತಿದೆ. ಈ ಯೋಜನೆಯು ಪರಿಸರದ ನಿಯಮಗಳನ್ನು ಉಲ್ಲಂಘಿಸಿರುವುದು ಮತ್ತು ಪರಿಸರದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಆಗಿರುವುದನ್ನು ಪರಿಗಣಿಸಿ ಬೃಹತ್ ಮೊತ್ತದ ದಂಡ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ದೇಶವಾಗಿದೆ: ಶೋಭಾ ಕರಂದ್ಲಾಜೆ

ಯುಪಿಸಿಯಲ್ ಸ್ಥಾವರವು ಐದು ಕೋಟಿ ರೂಪಾಯಿಯನ್ನು ಠೇವಣಿ ಯಾಗಿ ಇರಿಸಿದೆ. ಈ ಮೊತ್ತವನ್ನು ದಂಡದ ಸ್ವರೂಪದಲ್ಲಿ ವಿನಿಯೋಗ ಮಾಡಿಕೊಳ್ಳಲು ಹಸಿರು ಪೀಠ ಸೂಚಿಸಿದೆ. ಬರುವ ಮೂರು ತಿಂಗಳ ಒಳಗಾಗಿ ಯುಪಿಸಿಎಲ್ ಕೇಂದ್ರೀಯ ಪರಿಸರ ನಿಯಂತ್ರಣ ಮಂಡಳಿಗೆ ದಂಡದ ಮೊತ್ತವನ್ನು ಪಾವತಿಸಬೇಕೆಂದು ಹೇಳಿದೆ. ಈ ಹಣವನ್ನು ಪರಿಸರದ ಸುರಕ್ಷತೆಯ ದೃಷ್ಟಿಯಿಂದ ಬಳಸಿಕೊಳ್ಳುವಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯಕ್ಕೆ ಹಸಿರು ಪೀಠ ನಿರ್ದೇಶನ ನೀಡಿದೆ.

UDUPI UPCL 1

ಯುಪಿಸಿಎಲ್ ಪರಿಸರದ 10 ಕಿ.ಮೀ. ಪ್ರದೇಶದಲ್ಲಿ ಪರಿಸರ, ಬೆಳೆ ಹಾನಿ, ಮಣ್ಣಿನ ಫಲವತ್ತತೆಯ ಪರೀಕ್ಷೆ ಮಾಡಬೇಕು. ಈ ಪರಿಸರದ ಕುಡಿಯುವ ನೀರು ಕಪ್ಪು ವರ್ಣಕ್ಕೆ ತಿರುಗಿರುವ ಬಗ್ಗೆಯೂ ದೂರು ಕೇಳಿಬಂದಿದೆ. ಗಾಳಿಯ ಗುಣಮಟ್ಟ ಪರಿಶೀಲನೆಗಳನ್ನು ಮಾಡಬೇಕು. ಗ್ರಾಮದ ರೈತ ಹಾಗೂ ಪರಿಸರದ ಮನೆಮಂದಿಯನ್ನೂ ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಿ ಯುಪಿಸಿಎಲ್ ನಿಂದಾಗಿರುವ ನಷ್ಟವನ್ನು ಅಂದಾಜಿಸಲು ಸಮಿತಿಯೊಂದನ್ನು ರಚಿಸಲು ಸೂಚಿಸಿದೆ. ಇದನ್ನೂ ಓದಿ: ಜೂನ್ 13ಕ್ಕೆ ಹಾಜರಾಗಿ – ರಾಹುಲ್‌ಗೆ ಇಡಿ ಸಮನ್ಸ್

ಈ ಸಮಿತಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಅಥವಾ ಸಹಾಯಕ ಕಮಿಷನರ್ ಅಥವಾ ತಾಲೂಕು ದಂಡಾಧಿಕಾರಿಗಳ ಸಹಿತ ಯುಪಿಸಿಎಲ್‍ನ ಓರ್ವ ಪ್ರತಿನಿಧಿ ಇರಬಹುದು. ಉಳಿದಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಹಿರಿಯ ವಿಜ್ಞಾನಿಗಳು ಈ ವಿಶೇಷ ಸಮಿತಿಯಲ್ಲಿರುತ್ತಾರೆ. ಸಮಿತಿಯು ಅಂದಾಜಿಸುವ ಮೊತ್ತವನ್ನು ಯುಪಿಸಿಎಲ್ ಮೂಲಕ ಆಯಾಯ ರೈತರಿಗೆ, ಸಂತ್ರಸ್ತರಿಗೆ ತಲುಪುವಂತೆಯೂ ನೋಡಿ ಕೊಳ್ಳಬೇಕೆಂದು ಪೀಠವು ಆದೇಶಿಸಿದೆ.

UDUPI UPCL 3

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಹೋರಾಟಗಾರ ವಿಜಯ್ ಹೆಗ್ಡೆ, ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ಕರಾವಳಿಗೆ ಮಾರಕ. ಕೃಷಿ ಜನಜೀವನ ಪರಿಸರ ನದಿ ಸಮುದ್ರ ಹೇಗೆ ಎಲ್ಲಾ ಕಡೆ ಯುಪಿಸಿಎಲ್ ಎಂಬ ಕಂಪನಿ ಜನ ವಿರೋಧಿಯಾಗಿ ನಡೆದುಕೊಂಡಿದೆ. ಕಂಪನಿ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಕೋರ್ಟ್ ವಿಧಿಸಿರುವ 52 ಕೋಟಿ ರೂಪಾಯಿ ಯಾವ ಲೆಕ್ಕಕ್ಕೂ ಇಲ್ಲ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಕಂಪನಿ ಬಂದ್ ಆಗುವತನಕ ನಾವು ವಿರಮಿಸುವುದಿಲ್ಲ ಎಂದು ಹೋರಾಟಗಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *