ತುಮಕೂರು: ಇನ್ನೋವಾ ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಕಾರು ತೆರಳುತ್ತಿತ್ತು. ಹಾಗೆಯೇ ರಸ್ತೆ ಡಿವೈಡರ್ ದಾಟಿ ಹಾಸನ ಕಡೆಯಿಂದ ಟಿಟಿ ವಾಹನ ಬರುತ್ತಿತ್ತು. ಈ ವೇಳೆ ಕಾರು ಹಾಗೂ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಿಎಸ್‍ಐ ನೇಮಕಾತಿ ಅಕ್ರಮ- ಮತ್ತೋರ್ವನ ಬಂಧನ, ಬಂಧಿತ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆ
ಶುಕ್ರವಾರವಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ ನಡೆದಿತ್ತು. ಖಾಸಗಿ ಬಸ್ ಹಾಗೂ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಮೃತಪಟ್ಟಿರುವ ಘಟನೆ ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ನಡೆದಿತ್ತು. ಮತ್ತೊಂದು ಪಂಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ನಡೆದಿತ್ತು. ಇದನ್ನೂ ಓದಿ: ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು