ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್

Public TV
1 Min Read
MITHALI RAJ

ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

Mithali Raj

ಟೀಂ ಇಂಡಿಯಾದ ನಾಯಕಿಯಾಗಿ ಬ್ಯಾಟಿಂಗ್‍ನಲ್ಲಿ ಮಿಂಚುತ್ತಿದ್ದ ಮಿಥಾಲಿ, ಏಕದಿನ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಆಟಗಾರ್ತಿ. ಏಕದಿನ ಕ್ರಿಕೆಟ್‍ನಲ್ಲಿ 7 ಸಾವಿರ ರನ್ ಪೂರ್ಣಗೊಳಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಿಥಾಲಿ ರಾಜ್ ಪಾತ್ರರಾಗಿದ್ದರು. ಇದನ್ನೂ ಓದಿ: ಶೂಟಿಂಗ್‍ನಲ್ಲಿ ವಿಶ್ವದಾಖಲೆ- ಚಿನ್ನ ಗೆದ್ದ ಅವನಿ ಲೇಖರ

Mithali Raj

ಇಂದು ಸಾಮಾಜಿಕ ಜಾಲತಾಣದ ಮೂಲಕ ನಾನು ದೇಶಕ್ಕಾಗಿ ಕಳೆದ 23 ವರ್ಷಗಳಿಂದ ಆಡಿದ್ದೇನೆ. ಹಲವು ಏಳು ಬೀಳುಗಳನ್ನು ಕಂಡಿದ್ದೇನೆ. ತಂಡದ ಗೆಲುವಿಗಾಗಿ ಶ್ರಮಿಸಿದ್ದೇನೆ. ಇದೀಗ ಈ ಸುಂದರ ನೆನಪುಗಳೊಂದಿಗೆ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಬಿಸಿಸಿಐ, ಕಾರ್ಯದರ್ಶಿ ಜಯ್ ಶಾ ಮತ್ತು ನನ್ನ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಶತಕ ಸಿಡಿಸಿ ಸಚಿನ್, ಕೊಹ್ಲಿ, ಸ್ಮಿತ್ ಜೊತೆ ಸ್ಥಾನ ಪಡೆದ ರೂಟ್

1999ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಮಿಥಾಲಿ ಬ್ಯಾಟಿಂಗ್‍ನಲ್ಲಿ 232 ಪಂದ್ಯಗಳಿಂದ 7,805 ರನ್ ಸಿಡಿಸಿದ್ದಾರೆ. ನಾಯಕಿಯಾಗಿ 2005 ಮತ್ತು 2017ರ ಮಹಿಳಾ ವಿಶ್ವಕಪ್‍ನಲ್ಲಿ ಭಾರತ ತಂಡವನ್ನು ಫೈನಲ್ ಹಂತಕ್ಕೇರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 16ನೇ ವಯಸ್ಸಿಗೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಆಟಗಾರ್ತಿಯಾದ ಮಿಥಾಲಿ, ODI, T20, Test ಸೇರಿ ಒಟ್ಟು 333 ಪಂದ್ಯ ಆಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮಶ್ರೀ, ಅರ್ಜುನ ಪ್ರಶಸ್ತಿ, ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *