ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟ- ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ

Public TV
1 Min Read
coronavirus treatment in kukatpally 1024x768 1

ನವದೆಹಲಿ: ದೇಶದಲ್ಲಿ ಮೂರು ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳ ಪ್ರಕಾರ, ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ ಕಂಡಿದ್ದು, 111 ದಿನಗಳ ಬಳಿಕ ಪಾಸಿಟಿವಿಟಿ ಪ್ರಮಾಣ 2%ಗೂ ಅಧಿಕವಾಗಿದೆ. ಇದು ನಾಲ್ಕನೇ ಅಲೆಯ ಭೀತಿಗೆ ಕಾರಣವಾಗಬಹುದು ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

corona

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರದಿಂದಲೇ ಅತಿಹೆಚ್ಚು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆ 2,701 ಪ್ರಕರಣಗಳ ವರದಿಯಾಗಿದ್ದು, ಮುಂಬೈವೊಂದರಲ್ಲೆ 1,881 ಸೋಂಕಿತರು ಪತ್ತೆಯಾಗಿದ್ದಾರೆ. ಇದಲ್ಲದೇ ಮಹಾರಾಷ್ಟ್ರದಲ್ಲಿ B.A.5 ಉಪ ತಳಿಯ ಒಂದು ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿಯಿಂದಲೇ ದೂರು

ಮಹಾರಾಷ್ಟ್ರ ಹೊರತುಪಡಿಸಿದರೇ, ದೆಹಲಿ ಮತ್ತು ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿನ್ನೆ 564 ಕೇಸ್‍ಗಳು ಪತ್ತೆಯಾಗಿದ್ದು, 22 ದಿನಗಳ ಬಳಿಕ ದಾಖಲಾದ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ಸದ್ಯ ದೆಹಲಿಯಲ್ಲಿ ಪಾಸಿಟಿವಿಟಿ ಪ್ರಮಾಣ 2.64% ರಷ್ಟಿದೆ. ಇನ್ನೂ ಕೇರಳದಲ್ಲಿ 2271 ಪ್ರಕರಣಗಳ ವರದಿಯಾಗಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ

CORONA-VIRUS.

ತಮಿಳುನಾಡು, ಕರ್ನಾಟಕದಲ್ಲಿ ನಿತ್ಯ 500ರ ಆಸುಪಾಸಿನಲ್ಲಿ ಸೋಂಕಿತರ ಸಂಖ್ಯೆ ಪತ್ತೆಯಾಗುತ್ತಿದ್ದು, ಕ್ರಮೇಣ 1021, 2,623 ಸಕ್ರಿಯ ಪ್ರಕರಣಗಳಿದೆ. ದೇಶದಲ್ಲಿ ಹೀಗೆ ಹೆಚ್ಚುತ್ತಿರುವ ಸೋಂಕಿನ ಸಂಖ್ಯೆ ಹಿನ್ನಲೆ ಈಗಾಗಲೇ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸೋಂಕು ಪೀಡಿತ ರಾಜ್ಯಗಳಿಗೆ ನಿಯಂತ್ರಣಕ್ಕೆ ಸೂಚಿಸಿ ಪತ್ರ ಬರೆಯಲಾಗಿದೆ. ಅಲ್ಲದೇ ಎಲ್ಲಾ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿದ್ದು, ಹಲವು ರಾಜ್ಯಗಳು ಮಾಸ್ಕ್ ಕಡ್ಡಾಯ ಬಳಕೆ ನಿಯಮ ವಾಪಸ್ ತರಲು ಚಿಂತಿಸುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *