ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು ಕರಕಲಾಗಿರುವ ಘಟನೆ ನಗರದ ಮಡ್ಡಿಪೇಟೆಯಲ್ಲಿ ತಿಪ್ಪೆಯ ಬಳಿ ನಿಲ್ಲಿಸಿದ್ದಾಗ ನಡೆದಿದೆ.
ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ
ಮನೆ ಹೊರಗೆ ಪಾರ್ಕ್ ಮಾಡಿದ್ದ ಕಾರು ಬೆಳಗಾಗುವಷ್ಟರಲ್ಲಿ ಸುಟ್ಟು ಕರಕಲಾಗಿದೆ. ತಿಪ್ಪೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಾರಿಗೆ ತಗುಲಿರಬಹುದು ಅಂತ ಶಂಕಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಅರ್ಧ ಗಂಟೆಕಾಲ ಬೆಂಕಿ ನಂದಿಸಿದೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ – ಬೆಂಗಳೂರಿನ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ