ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Public TV
2 Min Read
BJP tweet

ಬೆಂಗಳೂರು: ಸಿದ್ದರಾಮಯ್ಯರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದ್ದು, ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಮಾಜಿ ಸಚಿವೆ ಮೋಟಮ್ಮ ಆತ್ಮಕತೆಯಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ, ಸಿದ್ದರಾಮಯ್ಯನವರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

ಟ್ವೀಟ್‌ನಲ್ಲಿ ಏನಿದೆ?
ದಲಿತ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮೂಲೆಗುಂಪು ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಅವರ ಆತ್ಮಕಥನದಲ್ಲಿ ಖಳನಾಯಕನಾಗಿ ಉಳಿದಿದ್ದಾರೆ. ಅವರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದೆ. ಹಾಗಾಗಿ ಅಹಿಂದದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ ಹಾಗೂ ವಿ.ಶ್ರೀನಿವಾಸ ಪ್ರಸಾದ್ ದಲಿತ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಇನ್ನೆಷ್ಟು ದಲಿತ ನಾಯಕರನ್ನು ಬಲಿ ಪಡೆಯುತ್ತೀರಿ?

ಅಂದು ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದಾಗಿದೆ. ಆದರೆ ಅಂತಹವರನ್ನೇ ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ.

Siddaramaiah

ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು? ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಸಿದ್ದರಾಮಯ್ಯ ಅವರೇ ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ?

ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಅವರನ್ನು ಸಚಿವರಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತ ವಿರೋಧಿಯಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

bjP

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವರಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಮೈಸೂರು `ಜಲದರ್ಶಿನಿ’ ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜಾಧ್ಯಕ್ಷರು ಸಿದ್ದರಾಮಯ್ಯ ಅವರ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ದಲಿತ ದ್ರೋಹವನ್ನೇ ಮಾಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮಂತ್ರಿ ಮಂಡಲದಲ್ಲಿ ತೆಗೆದುಕೊಳ್ಳದೇ ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *