ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

Public TV
1 Min Read
Sharad Pawar

ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಆಡಳಿತಾರೂಢ ಹಾಗೂ ಪ್ರತಿ ಪಕ್ಷಗಳೂ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಲು ಮಾತುಕತೆ ನಡೆಸಿವೆ.

ಈ ನಡುವೆ ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿವೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಬೆಂಬಲ ನೀಡಿದ್ದು, ಪವಾರ್ ಅವರನ್ನೇ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಮುಂದಾಗಿವೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

fotojet 41

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಯಸಿರುವ ವಿಪಕ್ಷಗಳು, ಈ ಕುರಿತು ಹಲವು ಸುತ್ತಿನ ಸರಣಿ ಸಭೆಗಳನ್ನು ನಡೆಸುತ್ತಿವೆ. ಶರದ್ ಪವಾರ್ ಅವರನ್ನೇ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ಕುರಿತು ಖುದ್ದು ಶರದ್ ಪವಾರ್ ಅವರಾಗಲಿ, ಎನ್‌ಸಿಪಿ ಪಕ್ಷವಾಗಲಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

02 2 2

ಆದಾಗ್ಯೂ, ರಾಷ್ಟ್ರಪತಿ ಚುನಾವಣೆಗೆ ಶರದ್ ಪವಾರ್ ಅವರು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಲಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

President Polls

ಇದೀಗ ಶರದ್ ಪವಾರ್ ಅವರೇ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್, ಶಿವಸೇನೆ, ಟಿಎಂಸಿ, ಡಿಎಂಕೆ ಪಕ್ಷಗಳು ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ತಮ್ಮ ಸಹಮತವನ್ನು ತೋರಲಿವೆ ಎನ್ನಲಾಗಿದೆ. ಆಮ್ ಆದ್ಮಿ ಪಕ್ಷವೂ ಪವಾರ್ ಅವರನ್ನು ಬೆಂಬಲಿಸುವುದರಲ್ಲಿ ಅಚ್ಚರಿ ಏನೂ ಇಲ್ಲವೆಂದು ಹೇಳಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *