ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 415 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ ಭರ್ತಿ 400 ಪಾಸಿಟಿವ್ ಕೇಸ್ ವರದಿಯಾಗಿದೆ.
ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,542ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 5 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,688ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.56ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 15 ಕೇಸ್ ಮತ್ತು 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 378 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್ವಾಲ್
ಈವರೆಗೆ ರಾಜ್ಯದಲ್ಲಿ ಒಟ್ಟು 39,56,749 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,953 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 52,267 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 16,190 ಸ್ಯಾಂಪಲ್ (ಆರ್ಟಿಪಿಸಿಆರ್ 12,185 + 4,005 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 400, ದಕ್ಷಿಣಕನ್ನಡ 5, ಕಲಬುರಗಿ 3, ಬಳ್ಳಾರಿ 2, ಬೆಳಗಾವಿ, ಧಾರವಾಡ, ಕೋಲಾರ, ಶಿವಮೊಗ್ಗ, ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 415 ಕೇಸ್ ವರದಿಯಾಗಿದೆ.