ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತೆ: ಆರಗ ಜ್ಞಾನೇಂದ್ರ

Public TV
1 Min Read
araga jnanendra 1

ಉಡುಪಿ: ರಾಹುಲ್ ಗಾಂಧಿ ನಿರಪರಾಧಿಯಾದರೆ ಹೊರಬರುತ್ತಾರೆ. ಅಪರಾಧಿಗಳಾದರೆ ಶಿಕ್ಷೆ ಅನುಭವಿಸುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ಕಳೆದ ಎರಡು ದಿನಗಳಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಯುತ್ತಿದೆ. ಆದರೆ ಇದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದೆ. ಈ ವಿಷಯದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಲೀಡರ್ಸ್‍ಗೆ ಒಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನು ಅಂತ ಇದೆಯಾ? ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಎಂದರು.

Rahul gandhi

ಕೋರ್ಟ್ ವಿಚಾರಣೆಗೆ ಕರೆದರೆ ಹೋಗಿ ಹೇಳಿಕೆ ಕೊಡಬೇಕು. ಇವರಿಗೆ ಈ ನೆಲದ ಕಾನೂನು ಅನ್ವಯಿಸುವುದಿಲ್ಲವೇ? ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಉಡುಪಿಯ ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಮತ್ತು ಸುಪಾರಿ ನೀಡಿರುವ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದರು. ಈ ಬೆಳವಣಿಗೆ ನನ್ನ ಗಮನಕ್ಕೆ ಬಂದಿದೆ. ಪೊಲೀಸರು ಈ ಕುರಿತು ನಿಗಾ ಇರಿಸಿದ್ದಾರೆ ಎಂದರು. ಇದನ್ನೂ ಓದಿ: ನಕಲಿ ಗಾಂಧಿಗಳ ಮೇಲಿನ ಅನುಕಂಪ ದಲಿತ ನಾಯಕ ಖರ್ಗೆ ವಿಚಾರಣೆ ವೇಳೆ ಇರಲಿಲ್ಲವೇಕೆ? ಬಿಜೆಪಿ ಟಾಂಗ್‌

pramod mutalik

ಪಿಎಫ್‍ಐ ನಿಷೇಧ ವಿಚಾರ ಕುರಿತು ಮಾತನಾಡಿದ ಅವರು, ಇಂತಹ ಮತಾಂಧ ಶಕ್ತಿಗಳು ನಮ್ಮ ನಡುವೆ ಇವೆ. ಹಿಜಬ್‍ನಿಂದ ಆರಂಭಿಸಿ ಏನೆಲ್ಲಾ ಮಾಡಿದ್ದಾರೆ ಎಲ್ಲರಿಗೂ ಗೊತ್ತು. ಇಂತಹ ಶಕ್ತಿಗಳನ್ನು ಮಟ್ಟ ಹಾಕಲು ಏನು ಮಾಡಬೇಕು ಎಂಬುವುದಾಗಿ ಚಿಂತನೆ ನಡೆಯುತ್ತಿದೆ. ಸೂಕ್ತ ಸಮಯ ಬಂದಾಗ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

ರಾಜ್ಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಕೇಂದ್ರಕ್ಕೆ ಆಗಾಗ ವರದಿ ಕಳಿಸುತ್ತಿದ್ದೇವೆ. ಉತ್ತರ ಪ್ರದೇಶದ ಪರಿಸ್ಥಿತಿಗೂ, ಕರ್ನಾಟಕದ ಪರಿಸ್ಥಿತಿಗೂ ಬಹಳಷ್ಟು ವ್ಯತ್ಯಾಸ ಇದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಬುಲ್ಡೋಜರ್ ಪ್ರಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *