ಚಾಮರಾಜನಗರ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧವೂ ಜಾರಿ ನಿರ್ದೇಶನಾಲಯ (ED) ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ED ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಂವಿಧಾನ ಹಾಗೂ ಕಾನೂನಿನ ಮೇಲೆ ನಂಬಿಕೆಯಿಲ್ಲ. ಕಾನೂನಿನ ಆಧಾರದ ಮೇಲೆ ಇ.ಡಿ ವಿಚಾರಣೆ ಮಾಡುತ್ತಿದೆ. ಹಿಂದೆ ನರೇಂದ್ರ ಮೋದಿ, ಅಮಿತ್ ಶಾ ಅವರ ವಿರುದ್ಧವೂ ಇ.ಡಿ ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ- ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್
ವಿಚಾರಣೆಗೆ ಹಾಜರಾಗುವುದು ಅವರ ಧರ್ಮ. ಆದರೆ ಕಾಂಗ್ರೆಸ್ ಬೇರೆ-ಬೇರೆ ಕಾರಣಗಳಿಗೆ ಹೋರಾಟ ಮಾಡುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದು ಕಾಂಗ್ರೆಸ್. ವಿಪಕ್ಷ ಆಗಲೂ ಕೂಡ ಕಾಂಗ್ರೆಸ್ ನಾಲಾಯಕ್ ಆಗಿದೆ. ಅದಕ್ಕಾಗಿ ದೇಶದಲ್ಲಿ ಜನತೆ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶೆಹಬಾಜ್ ಷರೀಫ್, ಇಮ್ರಾನ್ ಖಾನ್‍ಗಿಂತ ಪತ್ನಿಯರೇ ಹೆಚ್ಚು ಶ್ರೀಮಂತರು
ಕಾಂಗ್ರೆಸ್‌ಗೆ ಕೇಡುಗಾಲ ಬಂದಿದೆ. ತುರ್ತು ಪರಿಸ್ಥಿತಿ ಹೇರಿದ್ದು ತಮ್ಮದೇ ಪಾರ್ಟಿ ಎಂಬುದನ್ನು ಸಿದ್ದರಾಮಯ್ಯ ಯೋಚನೆ ಮಾಡಬೇಕು ಎಂದು ಕಟೀಲ್ ಕುಟುಕಿದ್ದಾರೆ.