ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ

Public TV
2 Min Read
yashwanthsinha

ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಬಿಜೆಪಿ ನಾಯಕ ಮಾಜಿ ಐಎಎಸ್ ಅಧಿಕಾರಿ ಯಶವಂತ್ ಸಿನ್ಹಾ ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಸಿನ್ಹಾ ಮಂಗಳವಾರ ಮಾಡಿರುವ ಟ್ವೀಟ್ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಸುಳಿವು ನೀಡಿದೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

ಟ್ವೀಟ್‌ನಲ್ಲೇನಿದೆ?
ಟಿಎಂಸಿಯಲ್ಲಿ ಮಮತಾ ಬ್ಯಾನರ್ಜಿ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಆಭಾರಿಯಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ, ವಿರೋಧದ ಏಕತೆಗಾಗಿ ಕೆಲಸ ಮಾಡಲು ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ನನ್ನ ಈ ಹೆಜ್ಜೆಗೆ ಅವರು ಅನುಮೋದನೆ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಸಿನ್ಹಾ ಬರೆದಿದ್ದಾರೆ.

ಪ್ರತಿಪಕ್ಷಗಳು ಈ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹಾಗೂ ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ ಅವರೆಲ್ಲರೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲು ನಿರಾಕರಿಸಿದ್ದರಿಂದ ಪ್ರತಿಪಕ್ಷಗಳು ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೆಣಗಾಡುತ್ತಿವೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ

Yashwant Sinha

ಜಂಟಿ ಅಭ್ಯರ್ಥಿಯನ್ನು ಅಂತಿಮಗೊಳಿಸಲು ವಿರೋಧ ಪಕ್ಷಗಳ ನಾಯಕರು ಮಂಗಳವಾರ ದೆಹಲಿಯಲ್ಲಿ ಸಭೆ ಸೇರಿದ್ದರು. ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಇರುವುದರಿಂದ ಆ ಸಭೆ ಅನಿಶ್ಚಿತವಾಗಿದ್ದರೂ ಸಿನ್ಹಾ ಅವರು ಇದೀಗ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Live Tv

Share This Article
Leave a Comment

Leave a Reply

Your email address will not be published. Required fields are marked *