ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕೃತ ನಿವಾಸ ತೊರೆದಿದ್ದಾರೆ.
ಇಂದು ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಆದರೂ ಇವರ ಕುಟುಂಬ ಸಿಎಂ ಅಧಿಕೃತ ನಿವಾಸವನ್ನು ತೊರೆದು ಸ್ವಂತ ನಿವಾಸಕ್ಕೆ ತೆರಳಿದ್ದಾರೆ.
ಇಂದು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ಅವರು ಮಹಾರಾಷ್ಟ್ರ ರಾಜೀಯ ಬಿಕ್ಕಟ್ಟಿನ ಕುರಿತು ಮಾತನಾಡಿದ್ದರು. ಆ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿರುವುದಾಗಿ ತಿಳಿಸಿದ್ದರು.ನಮ್ಮ ಜನರಿಗೆ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದು ಬೇಕಿಲ್ಲದಿದ್ದರೆ, ಯಾವುದೇ ಶಾಸಕರು ನಾನು ಮುಖ್ಯಮಂತ್ರಿಯಾಗಿರುವುದು ಬೇಡ ಎಂದು ಹೇಳಿದರೆ, ತಕ್ಷಣವೇ ನಾನು ರಾಜೀನಾಮೆ ಸಲ್ಲಿಸುತ್ತೇನೆ. ನಾನು ‘ವರ್ಷ’ ನಿವಾಸದಿಂದ ಮಾತೋಶ್ರಿಗೆ ಮರಳುತ್ತೇನೆ ಎಂದಿದ್ದರು. ಇದನ್ನೂ ಓದಿ: ಶಿವಸೇನೆಯ ಉಳಿವಿಗಾಗಿ ಮೈತ್ರಿಯಿಂದ ಹೊರಬರುವುದು ಅನಿವಾರ್ಯ: ಏಕನಾಥ್ ಶಿಂಧೆ
ಈಗಾಗಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಶಾಸಕಾಂಗ ಸಭೆಯನ್ನು ವಿಸರ್ಜನೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ