ಪಬ್ಲಿಕ್‌ ಟಿವಿ ಇಂಪ್ಯಾಕ್ಟ್: ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ- ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Public TV
1 Min Read
ROAD BOMMAI

ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

MODI ROAD 1

Public Tv IMPACT copy 2 ಹೌದು. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಲಾಗಿತ್ತು. ಇದೀಗ ಈ ರಸ್ತೆ ಕುಸಿದಿದೆ.‌ ಈ ಕುರಿತು ನಿಮ್ಮ ಪಬ್ಲಿಕ್‌ ಟಿವಿ ಇಂದು ರಿಯಾಲಿಟಿ ಚೆಕ್‌ ನಡೆಸಿ ವರದಿ ಪ್ರಸಾರ ಮಾಡಿತ್ತು. ಇದೀಗ ಈ ಸಂಬಂಧ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇದನ್ನೂಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

ಈ ರಸ್ತೆ ಕಳಪೆ ಕಾಮಗಾರಿಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ರಾಜ್ಯ ಸರ್ಕಾರದ ವರದಿ ಕೇಳಿದೆ. ಕಳಪೆ ಕಾಮಗಾರಿ ಸಂಬಂಧ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದೆ. ಸದ್ಯ ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *