ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

Public TV
1 Min Read
Shimoga Children Doctors Hospital Sick Injection

ಶಿವಮೊಗ್ಗ: ಬೇರೆ-ಬೇರೆ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 14 ಮಕ್ಕಳು ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ ನಂತರ ಅಸ್ವಸ್ಥಗೊಂಡ ಘಟನೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Shimoga Children Doctors Hospital Sick Injection 2

ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ-ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ 4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ 

Shimoga Children Doctors Hospital Sick Injection 3

ಘಟನೆ ನಂತರ ಮಕ್ಕಳ ಪೋಷಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೋಷಕರು ಹಾಗೂ ವೈದ್ಯರಿಂದ ಮಾಹಿತಿ ಪಡೆದರು.

Shimoga Children Doctors Hospital Sick Injection 1

ಅಲ್ಲದೇ ಘಟನೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಪೋಷಕರು ಭಯಪಡುವ ಅಗತ್ಯವಿಲ್ಲ. ಯಾವುದೇ ಮಕ್ಕಳಿಗೂ ಪ್ರಾಣಾಪಾಯ ಇಲ್ಲ. ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ಕೋವಿಡ್‌ ಕೇಸ್‌ ಕಡಿಮೆ ದಾಖಲು – ಇಂದು 133 ಮಂದಿಗೆ ಸೋಂಕು

Live Tv

Share This Article
Leave a Comment

Leave a Reply

Your email address will not be published. Required fields are marked *