ಜೈಪುರ: ಉದಯಪುರದಲ್ಲಿ ನಡೆದ ಟೈಲರ್ ಕೊಲೆ ವೀಕ್ಷಿಸಲು ತುಂಬಾ ಘೋರವಾಗಿದೆ. ದಯವಿಟ್ಟು ಈ ವೀಡಿಯೋವನ್ನು ವೀಕ್ಷಿಸಬೇಡಿ ಎಂದು ರಾಜಸ್ಥಾನದ ಉನ್ನತ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅಲ್ಲಿನ ಎಡಿಜಿ, ಟೈಲರ್ ಕೊಲೆಯ ವೀಡಿಯೋವನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಮನವಿ ಮಾಡಿದರು. ಏಕೆಂದರೆ ಈ ವೀಡಿಯೋ ಅತಿ ಹೆಚ್ಚು ಭೀಕರವಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ವಿಷಯವಾಗಿದೆ ಎಂದು ತಿಳಿಸಿದ್ದಾರೆ. ವೀಡಿಯೋ ಸಾಕ್ಷ್ಯವನ್ನು ಆಧರಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ ಟೈಲರ್ ಕನ್ಹಯ್ಯಾ ಲಾಲ್ ಅವರು ಉದಯ್‍ಪುರದ ವಿಶೇಷವಾಗಿ ಜನನಿಬಿಡ ಮಾರುಕಟ್ಟೆಯಲ್ಲಿ ತಮ್ಮ ಅಂಗಡಿಯಲ್ಲಿದ್ದರು. ಕನ್ಹಯ್ಯ ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಕೋಪಗೊಂಡ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ನಿನ್ನೆ ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್
ವೀಡಿಯೋದಲ್ಲಿ ಏನಿದೆ?: ನಾನು ರಿಯಾಜ್ ಅಹ್ಮದ್. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ಧ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನು ಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್