ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್‍ನಲ್ಲಿದ್ದ 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗದ ಉಂಬ್ಳೆಬೈಲು ಬಳಿ ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಶೃಂಗೇರಿ ಕಡೆ ತೆರಳುತ್ತಿತ್ತು. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಹೊಸದಾಗಿ ಗೆದ್ದವರ ಕ್ಷೇತ್ರಗಳು ಡೇಂಜರ್ – ಬಿಜೆಪಿ ಇಂಟರ್ನಲ್ ರಿಪೋರ್ಟ್ ಔಟ್
ಖಾಸಗಿ ಬಸ್‍ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಘಟನೆ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹಾರಾಡಿದ ಮಾನವರಹಿತ ಯುದ್ಧ ವಿಮಾನ – DRDO ಪರೀಕ್ಷೆ ಯಶಸ್ವಿ