2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‍ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ಹೆಚ್‍ಡಿಕೆ

Public TV
3 Min Read
HD KUMARSWAMY

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

HD KUMARASWAMY 1

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‍ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ ನಡೆಸಲಾಗಿದೆ. ಅವರ ಶಕ್ತಿ ಇರುವುದು 60 ರಿಂದ 65 ಸೀಟು ಅಷ್ಟೇ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಕೊಡಗಿನಲ್ಲಿ ಈವರೆಗೆ ಒಟ್ಟು 7 ಬಾರಿ ಭೂಕಂಪನ

2013ರಲ್ಲಿ ಯಡಿಯೂರಪ್ಪನವರು ಇನ್ನೊಂದು ಪಕ್ಷ ಮಾಡದಿದ್ದರೆ ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಅವರು ಯಡಿಯೂರಪ್ಪನವರನ್ನು ನೆನಪಿಸಿಕೊಳ್ಳಬೇಕು. ಅಂದು ಅಧಿಕಾರದಲ್ಲಿದ್ದ ಪಕ್ಷ ನಂತರ 78 ಸ್ಥಾನಕ್ಕೆ ಇಳಿದಿದೆ. ಇವತ್ತು ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ, ಕಾಂಗ್ರೆಸ್ ಪಕ್ಷ 70 ಸೀಟು ದಾಟಲ್ಲ. ನಮ್ಮ ಪಕ್ಷಕ್ಕೆ ಜನತೆಯ ಮತ್ತು ದೇವರ ಆಶೀರ್ವಾದ ಇದೆ. ನಾನು ಚಾಲೆಂಜ್ ಮಾಡುತ್ತೇನೆ. ನಮ್ಮ ಪಕ್ಷ ಈ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮೇಲಿರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

bjp congress 1

ರಾಜಣ್ಣ ಎಸ್‌ಟಿ ಜನಾಂಗದವರು. ಅವರ ಜನಾಂಗಕ್ಕೆ ಕೊಡುಗೆ ಕೊಟ್ಟಿರೋರು ಯಾರು?. ದೇವೇಗೌಡರು ಕೊಟ್ಟ ಕೊಡುಗೆ ಬಗ್ಗೆ ಸಿದ್ದರಾಮಯ್ಯನವರಿಗೂ ಗೊತ್ತು. 14 ಸೀಟು ಎಸ್‍ಟಿಗೆ ಕೊಟ್ಟಿದ್ದು ದೇವೇಗೌಡರು. ಅದು ಕಾಂಗ್ರೆಸ್ ನಾಯಕ ಉಗ್ರಪ್ಪನವರಿಗೂ ಗೊತ್ತು. ತುಮಕೂರಲ್ಲಿದ್ದು ಈ ಮನುಷ್ಯ ಮಾಡಿದ್ದೇನು ಎಂದು ಪ್ರಶ್ನಿಸಿದರು.

ತುಮಕೂರಿನಲ್ಲಿ ತಳಜಾತಿಗಳಿಗೆ ಶಕ್ತಿ ಕೊಟ್ಟಿದ್ದು ದೇವೇಗೌಡರು. ಮೀಸಲಾತಿ ವ್ಯವಸ್ಥೆ ಇಲ್ಲದೇ ಇದ್ದಾಗಲೂ ಅವಕಾಶ ಕೊಟ್ಟಿದ್ದಾರೆ. ಈಗಲೂ ದುರಹಂಕಾರದ ಮಾತನ್ನು ಆಡಿದ್ದಾರೆ. ಅವರು ಎಚ್ಚರಿಕೆಯಿಂದ ಮಾತಾಡಬೇಕು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

ಹಿಂದಿನ ಸರ್ಕಾರಗಳ ವೈಫಲ್ಯದಿಂದ ಇಂದು ಬೆಂಗಳೂರಿಗೆ ಸಮಸ್ಯೆ ಆಗಿದೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, 2008 ರಿಂದ 2013 ರವರೆಗೂ ಅಧಿಕಾರ ನಡೆಸಿದ್ದು ಬಿಜೆಪಿ ಸರ್ಕಾರ. ಆಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಿದೆ. ನಾನು 14 ತಿಂಗಳು ಮೈತ್ರಿ ಸರ್ಕಾರದಲ್ಲಿದ್ದೆ. 2008ರಲ್ಲಿ ಔಟರ್ ಪೆರಿಪರಲ್ ರಿಂಗ್ ರೋಡ್ ನಿರ್ಮಾಣಕ್ಕೆ ನಾನು ಚಾಲನೆ ಕೊಟ್ಟಿದ್ದು. ಇನ್ನರ್ ರಿಂಗ್ ರೋಡ್‍ಗೆ ಅನುದಾನ ನೀಡಿದ್ದೆ. ಅವು ಎಲ್ಲವೂ ನೆನೆಗುದಿಗೆ ಬಿದ್ದಿದೆ ಎಂದು ಟೀಕಾ ಪ್ರಹಾರ ನಡೆಸಿದರು.

BASAVARAJ BOMMAI 2

ಮೈತ್ರಿ ಸರ್ಕಾರ ಅವಧಿಯಲ್ಲಿ ಪಿಆರ್‌ಆರ್‌ ಯೋಜನೆಯನ್ನು ಜಾರಿ ಮಾಡಿದ್ದೆ. ಐದು ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಲು ಮುಂದಾಗಿದ್ದೆ. ಕೊನೆ ಹಂತದವರೆಗೆ ಯೋಜನೆ ತಂದು ನಿಲ್ಲಿಸಿದ್ದೆ. ಟನಲ್ ರೋಡ್ ಅಡಿಪಾಯ ಹಾಕಿದ್ದೆ. ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 9 ಸಾವಿರ ಕೋಟಿ ರೂ. ನೀಡಬೇಕು. ಆದರೆ, ಇವರು 4 ಸಾವಿರ ಕೋಟಿ ರೂ.ಗೆ ನಿಲ್ಲಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳಿಂದ ಬೆಂಗಳೂರು ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ ಎಂದು ಅವರು ಟೀಕಿಸಿದರು.

ಅಭಿವೃದ್ಧಿ ಹೆಸರಿನಲ್ಲಿ ಲೂಟಿ:
ಬಿಬಿಎಂಪಿ ಕಚೇರಿಯಲ್ಲಿ ದಾಖಲೆಗೆ ಬೆಂಕಿ ಇಟ್ಟವರು ಯಾರು? ಅದಕ್ಕೆ ಸಿಎಂ ಉತ್ತರ ಕೊಡ್ತಾರಾ? ಎಂದು ಪ್ರಶ್ನಿಸಿದ ಹೆಚ್‍ಡಿಕೆ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸೆಂಟರ್ ಅನ್ನು ನಾನು ಸಿಎಂ ಆದಾಗಲೇ ಮಾಡಿದ್ದೆ. ಈಗ ಅದಕ್ಕೆ ಸುಣ್ಣ ಬಣ್ಣ ಹೊಡೆದು ಚಾಲನೆ ನೀಡಿದ್ದಾರೆ. ಬೆಂಗಳೂರಿನ ಈಗಿನ ಪರಿಸ್ಥಿತಿಗೆ ಎರಡು ಪಕ್ಷಗಳು ಕಾರಣ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನಡೀತಾನೇ ಇದೆ ಎಂದು ಕಿಡಿಕಾರಿದರು.

ಜನತಾಮಿತ್ರ ಕರಪತ್ರ ಬಿಡುಗಡೆ:
ದೇವೇಗೌಡರು ಹಾಗೂ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬೆಂಗಳೂರಿಗೆ ಮಾಡಿರುವ ಯೋಜನೆಗಳ ಕುರಿತ ಜನತಾಮಿತ್ರ ಕರಪತ್ರಗಳನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದರು. ಇದನ್ನೂ ಓದಿ: ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

ನಿನ್ನೆ 15 ಜನತಾ ಮಿತ್ರ ವಾಹನಗಳಿಗೆ ಚಾಲನೆ ನೀಡಿದ್ದೇವೆ. ಈಗ ಕರಪತ್ರಗಳ ದಾಖಲೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ದೇವೇಗೌಡರು ಹಾಗೂ ನನ್ನ ಅವಧಿಯಲ್ಲಿ ಆಗಿರುವ ಅಭಿವೃದ್ದಿಯನ್ನು ಜನರ ಮುಂದಿಡುತ್ತೇವೆ. ಮನೆ ಮನೆಗಳಿಗೆ ಕರಪತ್ರಗಳನ್ನು ಹಂಚಲು ತೀರ್ಮಾನ ಮಾಡಲಾಗಿದೆ. ಜೊತೆಗೆ ಹದಿನೈದು ದಿನ ಸುಮಾರು 70 ರಿಂದ 80 ಪಕ್ಷದ ಸಭೆಗಳನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಸುರೇಶ್ ಬಾಬು ಉಪಸ್ಥಿತರಿದ್ದರು.

Live Tv

Share This Article
Leave a Comment

Leave a Reply

Your email address will not be published. Required fields are marked *