ಕೊಲೊಂಬೊ: ಶ್ರೀಲಂಕಾದಲ್ಲಿ ಇಂಧನ ಬಿಕ್ಕಟ್ಟಿನಿಂದಾಗಿ ಶಿಕ್ಷಣ ಸಚಿವಾಲಯವು ಇಂದಿನಿಂದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ.
ಈ ಬಗ್ಗೆ ಶ್ರೀಲಂಕಾ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದು, ಮುಂದಿನ ರಜೆಯ ಅವಧಿಯಲ್ಲಿ ಶಾಲೆಯು ಪಠ್ಯಕ್ರಮವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಾಂಶುಪಾಲರ ಮೇಲೆ ಸಾರಿಗೆ ತೊಂದರೆಯ ಪರಿಣಾಮ ಬೀರದ ಪರಿಸ್ಥಿತಿಗಳಲ್ಲಿ ವಿಭಾಗೀಯ ಮಟ್ಟದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ತರಗತಿಗಳನ್ನು ನಡೆಸಲು ಅನುಮತಿಸಲಾಗುವುದು ಎಂದು ಹೇಳಿದರು.
ಕೊಲಂಬೊ ನಗರದ ಆಸುಪಾಸಿನಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ-ಅನುಮೋದಿತ, ಖಾಸಗಿ ಶಾಲೆಗಳಲ್ಲಿ ದೀರ್ಘಾವಧಿಯ ವಿದ್ಯುತ್ ಕಡಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರದವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಲಿಬಿಯಾದಲ್ಲಿ ಸಂಸತ್ ಭವನಕ್ಕೆ ಬೆಂಕಿ
ಇದೇ ವೇಳೆ ಮುಂದಿನ ವಾರದಲ್ಲಿ ಆನ್‍ಲೈನ್ ಬೋಧನೆಗೆ ಅನುಕೂಲವಾಗುವಂತೆ ಶ್ರೀಲಂಕಾದ ಲೋಕೋಪಯೋಗಿ ಆಯೋಗವು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸದಿರಲು ಒಪ್ಪಿಕೊಂಡಿದೆ ಎಂದು ಮಾಹಿತಿ ನೀಡಿದರು.
ಈ ಹಿಂದೆಯೂ ಜೂನ್ 18ರಂದು ಶ್ರೀಲಂಕಾ ಸರ್ಕಾರವು ಎಲ್ಲಾ ಶಾಲೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವುದಾಗಿ ಘೋಷಿಸಿತ್ತು. ಇದನ್ನೂ ಓದಿ: ಮಹಾ ಬಿಕ್ಕಟ್ಟಿಗೆ ಇಂದು ಕ್ಲೈಮ್ಯಾಕ್ಸ್ – ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ