ತುಮಕೂರು: ಹೊಟ್ಟೆ ನೋವು ತಾಳಲಾರದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೊಡಬಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹೃತಿಕ್ ನಾಯಕ್ (19) ಎಂದು ಗುರುತಿಸಲಾಗಿದೆ. ಯುವಕ ಹೆಚ್ಚು ಮದ್ಯಸೇವನೆಯಿಂದ ಪದೇ ಪದೇ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಆದರೆ ಇಂದು ಹೊಟ್ಟೆ ನೋವು ತಾಳಲಾರದೆ ಮನನೊಂದು ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೊಳೆಗೆ ಕಾರು ಉರುಳಿದ ಪ್ರಕರಣಕ್ಕೆ ಟ್ವಿಸ್ಟ್- ಆಕ್ಸಿಡೆಂಟ್ ಆಗೋ 4 ನಿಮಿಷ ಮೊದಲೇ ಕರೆ ಮಾಡಿದ್ದ ಯುವಕರು..!
ಇದೇ ರೀತಿ ಇತ್ತೀಚೆಗಷ್ಟೇ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಂಜಿತಾ (30) ಅವರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿತ್ತು. ಈ ಬಗ್ಗೆ ಪತಿ ವೆಂಕಟೇಶ್ ಕುಣಿಗಲ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ಗುಂಡಿನ ದಾಳಿ- 15 ಮಂದಿ ಸ್ಥಳದಲ್ಲೇ ಸಾವು