ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್

Public TV
2 Min Read
SURYAKUMAR YADV

ಲಂಡನ್: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್ ಯಾದವ್ ಬ್ಯಾಕ್‍ವರ್ಡ್ ಪಾಯಿಂಟ್ ಮೂಲಕ ಸಿಡಿಸಿದ ಭರ್ಜರಿ ಸಿಕ್ಸ್ ಒಂದು ವೈರಲ್ ಆಗುತ್ತಿದೆ.

SURYAKUMAR YADAV

ನಿನ್ನೆ ನಡೆದ ಇಂಗ್ಲೆಂಡ್ ಮತ್ತು ಭಾತರತ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಆಟದ ಮೂಲಕ ಶತಕ ಸಿಡಿಸಿ ಮಿಂಚಿದ್ದರು. ಇಂಗ್ಲೆಂಡ್ ನೀಡಿದ 216 ರನ್‍ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರಿಸ್‍ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ 117 ರನ್ (55 ಎಸೆತ, 14 ಬೌಂಡರಿ, 6 ಸಿಕ್ಸ್) ಚಚ್ಚಿ ತಂಡದ ಗೆಲುವಿಗಾಗಿ ಹೋರಾಡಿ ಅಭಿಮಾನಿಗಳ ಮನಗೆದ್ದಿದ್ದಾರೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಸಿಡಿಸಿದ 6 ಸಿಕ್ಸರ್‌ಗಳು ಮನಮೋಹಕವಾಗಿತ್ತು. ಈ ಪೈಕಿ ಇದೀಗ ಬ್ಯಾಕ್‍ವರ್ಡ್ ಪಾಯಿಂಟ್‍ನತ್ತ ಸಿಡಿಸಿದ ಸಾಲಿಡ್ ಸಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪಂದ್ಯ ಸೋತು ಸರಣಿ ಗೆದ್ದ ಭಾರತ – ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್‌ಗೆ 17 ರನ್‌ಗಳ ಜಯ

 

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 215 ರನ್ ಬಾರಿಸಿತು. 216 ರನ್‍ಗಳ ಗುರಿ ಬೆನ್ನಟ್ಟಿದ ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ 18 ಓವರ್‌ ಅಂತ್ಯದ ವರೆಗೆ ಹೋರಾಡಿ ಕೊನೆ ಕ್ಷಣದಲ್ಲಿ ವಿಕೆಟ್ ಕೈಜೆಲ್ಲಿಕೊಂಡರು. ಈ ಮೂಲಕ ಭಾರತದ ಗೆಲುವಿನ ಆಸೆ ಕಮರಿತು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಸೋಲುಂಡಿತು. ಇತ್ತ ಸೂರ್ಯಕುಮಾರ್‌ ಯಾದವ್‌ ಸಿಡಿಸಿದ ಚೊಚ್ಚಲ ಶತಕ ವ್ಯರ್ಥವಾದರೂ, ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ 5ನೇ ಆಟಗಾರ ಎಂಬ ಹೆಗ್ಗಳಿಕೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿಯ ಜಾಹೀರಾತು ನಿಲ್ಲಿಸಿದ ವಿವೋ

17 ರನ್‍ಗಳ ಅಂತರದ ಜಯದೊಂದಿಗೆ ಇಂಗ್ಲೆಂಡ್ ತವರಿನಲ್ಲಿ ವೈಟ್‍ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿತು. ಭಾರತ ತಂಡ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *