ಲಂಡನ್: ಪ್ರತಿಷ್ಠಿತ ವಿಂಬಲ್ಡನ್ ಟೆನ್ನಿಸ್ ಟೂರ್ನಿಯಲ್ಲೂ ಕನ್ನಡದ ಕೆಜಿಎಫ್ ಸದ್ದು ಮಾಡಿದೆ.
ಫೈನಲ್ ಪಂದ್ಯದಲ್ಲಿ ನೋವಾಕ್ ಜೋಕೋವಿಚ್, ಆಸ್ಪ್ರೇಲಿಯಾದ ನಿಕ್ ಕಿರಿಯೋಸ್ ವಿರುದ್ಧ 4-6 6-3 6-4 7-6(3) ಅಂತರದಲ್ಲಿ ಗೆಲುವು ಸಾಧಿಸಿ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ.
ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ವಿಂಬಲ್ಡನ್ ಫೇಸ್‌ಬುಕ್ ಖಾತೆಯಲ್ಲಿ ಕೆಜಿಎಫ್ ಸಿನಿಮಾದ ಪ್ರಸಿದ್ಧ ಡೈಲಾಗ್ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. “Trophies, trophies, trophies….I like trophies and trophies like me…I can’t avoid” ಎಂದು ಬರೆದು ಜೋಕೋವಿಚ್ ಅವರನ್ನು ಅಭಿನಂದಿಸಲಾಗಿದೆ. ಇದನ್ನೂ ಓದಿ: ಮುಂದಿನ ಚಿತ್ರಕ್ಕಾಗಿ 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಯಶ್
ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್ ಅವರ ಡೈಲಾಗ್ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿತ್ತು. “Violence, violence, violence. I don’t like it. I avoid. But, violence likes me, I can’t avoid” ಈ ಡೈಲಾಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದರು.
ವಿಂಬಲ್ಡನ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ನೋವಾಕ್ ಜೋಕೋವಿಚ್ 21ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಲಸಿಕೆ ಕಾರಣ ಅಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಆದ ಅವಮಾವನ್ನು ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ತೀರಿಸಿಕೊಂಡಿದ್ದಾರೆ.
ನೋವಾಕ್ ಜೋಕೋವಿಚ್ ಮತ್ತೊಂದು ದಾಖಲೆ ಬರೆದಿದ್ದಾರೆ. ಇದು ನೋವಾಕ್ ಗೆದ್ದ ಸತತ 4ನೇ ವಿಂಬಲ್ಡನ್ ಪ್ರಶಸ್ತಿಯಾಗಿದೆ. ಇಷ್ಟೇ ಅಲ್ಲ ವಿಂಬಲ್ಡನ್‌ನ 8 ಫೈನಲ್ ಪಂದ್ಯದಲ್ಲಿ 7 ಪಂದ್ಯ ಗೆದ್ದ ಮತ್ತೊಂದು ದಾಖಲೆ ಸರಿಗಟ್ಟಿದ್ದಾರೆ. ಈ ಹಿಂದೆ ಅಮೆರಿಕದ ಪೀಟ್ ಸ್ಯಾಂಪ್ರಸ್ 7 ಬಾರಿ ವಿಂಬಲ್ಡನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.