ನವದೆಹಲಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಆಗಸ್ಟ್ 10ರವರೆಗೂ ಅವರನ್ನು ಬಂಧಿಸದಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣ ಸಂಬಂಧ ಉತ್ತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ದೇಶದ್ಯಾಂತ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಈ ಎಲ್ಲಾ ಪ್ರಕರಣಗಳನ್ನು ರದ್ದು ಮಾಡಿ. ಇಡೀ ಪ್ರಕರಣವನ್ನು ದೆಹಲಿಗೆ ವರ್ಗಾವಣೆ ಮಾಡುವಂತೆ ಹಾಗೂ ಜೀವ ಬೆದರಿಕೆ ಹಿನ್ನೆಲೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಅಮಿತ್ ಶಾ ಫೋಟೋ ದುರ್ಬಳಕೆ ಮಾಡಿದ್ದ ಬಾಲಿವುಡ್ ನಿರ್ದೇಶಕ ಅವಿನಾಶ್ ಅರೆಸ್ಟ್
ಈ ಅರ್ಜಿ ಬಗ್ಗೆ ಇಂದು ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ, ಆಗಸ್ಟ್ 10ರವರೆಗೂ ಅವರನ್ನು ಬಂಧಿಸಬಾರದು ಎಂದು ಸೂಚಿಸಿ, ಅವರ ಮೇಲಿನ ಎಫ್‌ಐಆರ್‌ಗಳನ್ನು ರದ್ದುಪಡಿಸುವ ಹಾಗೂ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವ ಬಗ್ಗೆ ಪರಿಶೀಲಿಸುವುದಾಗಿ ಪೀಠ ಹೇಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿತು. ಇದನ್ನೂ ಓದಿ: ತುರ್ತು ಭೂಸ್ಪರ್ಶಿಸಿದ 2 ಗೋಫಸ್ಟ್ ವಿಮಾನ
ಈ ಹಿಂದೆ ತಮ್ಮ ಮೇಲಿನ ಎಲ್ಲಾ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿ ನೂಪುರ್ ಶರ್ಮಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ನ್ಯಾ. ಸೂರ್ಯಕಾಂತ್ ನೂಪುರ್ ಶರ್ಮಾರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಡೀ ದೇಶದಲ್ಲಿ ಬೆಂಕಿ ಹೊತ್ತಲು ನೂಪುರ್ ಶರ್ಮಾ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.