ದಕ್ಷಿಣ ಭಾರತದ ಸ್ಟಾರ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಚಿತ್ರ `ಲೈಗರ್’ ಟ್ರೈಲರ್ ರಿಲೀಸ್ ಆಗಿದ್ದು, ಬಾಕ್ಸರ್ ಆಗಿ ಮಿಸ್ಟರ್ ವಿಜಯ್ ದೇವರಕೊಂಡ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲೂ ʻಲೈಗರ್ʼ ಆಗಿ ವಿಜಯ್ ಸಂಚಲನ ಮೂಡಿಸಿದ್ದಾರೆ.

India,
We give you Blood, Sweat, Madness.
We give you Mass Action Entertainment.
We give you The LIGER Trailer!
ATTACK!https://t.co/u7529aF8NS#LIGER#LigerTrailer
Aug 25th Worldwide Release! pic.twitter.com/f6kFdVvCPS
— Vijay Deverakonda (@TheDeverakonda) July 21, 2022
ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ʻಲೈಗರ್ʼ ಚಿತ್ರ ತೆರೆ ಕಾಣುತ್ತಿದೆ. ಈ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಅಭಿನಯಿಸಿದ್ದು, ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಣ ಸಂಸ್ಥೆ ಧರ್ಮ ಪ್ರೊಡಕ್ಷನ್ ಮತ್ತು ಪುರಿ ಕನೆಕ್ಟ್ಸ್ ಬಂಡವಾಳ ಹೂಡಿದ್ದಾರೆ. ವಿಶ್ವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಈ ಚಿತ್ರದಲ್ಲಿ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದು, ರಮ್ಯಾ ಕೃಷ್ಣ ವಿಜಯ್ ದೇವರಕೊಂಡ ತಾಯಿಯಾಗಿ ಅಭಿನಯಿಸಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗ್ತಿರುವ ಲೈಗರ್ ಚಿತ್ರ ಆಗಸ್ಟ್ ೨೫ಕ್ಕೆ ತೆರೆಗೆ ಅಬ್ಬರಿಸುತ್ತಿದೆ.

