Monkeypox; ಕೇರಳದಲ್ಲಿ 3ನೇ ಪ್ರಕರಣ ಪತ್ತೆ

Public TV
1 Min Read
monkeypox

ತಿರುವನಂತಪುರಂ: ಕೇರಳದಲ್ಲಿ ಮಂಕಿಪಾಕ್ಸ್‌ ವೈರಸ್‌ನ 3ನೇ ಪ್ರಕರಣ ಪತ್ತೆಯಾಗಿದೆ. ಯುಎಇ (ಸಂಯುಕ್ತ ಅರಬ್‌ ಒಕ್ಕೂಟ)ಯಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

35 ವಯಸ್ಸಿನ ವ್ಯಕ್ತಿ ಕಳೆದ ತಿಂಗಳು ಯುಎಇಯಿಂದ ಕೇರಳಕ್ಕೆ ಆಗಮಿಸಿದ್ದರು. ಅವರಿಗೆ ಮಂಕಿಪಾಕ್ಸ್‌ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಆಸ್ಪತ್ರೆಯ ಖಾಸಗಿ ವಾರ್ಡ್ ಕೊಠಡಿಗಳ ಮೇಲೆ GST ಸುಂಕ – ರೋಗಿಗಳಿಗೆ ಶಾಕ್ ಕೊಟ್ಟ AIIMS

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ಮಲಪ್ಪುರಂ ಮೂಲದವರು ಜುಲೈ 6 ರಂದು ರಾಜ್ಯಕ್ಕೆ ಆಗಮಿಸಿದ್ದು, ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: Bundelkhand Expressway; ಒಂದು ವಾರಕ್ಕೇ ಮಳೆಗೆ ಗುಂಡಿ ಬಿತ್ತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ರಸ್ತೆ

ದೇಶದಲ್ಲಿ ವರದಿಯಾದ ಮಂಕಿಪಾಕ್ಸ್‌ ವೈರಸ್‌ನ 3 ಪ್ರಕರಣಗಳೂ ಕೇರಳದಲ್ಲೇ ಪತ್ತೆಯಾಗಿವೆ. ರಾಜ್ಯದಲ್ಲಿ ತೀವ್ರ ನಿಗಾವಹಿಸಲಾಗಿದೆ. ಅಲ್ಲದೇ ನೆರೆ ರಾಜ್ಯ ಕರ್ನಾಟಕದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *