ವಿಜಯೇಂದ್ರ ಸ್ಪರ್ಧೆ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳೋದು ಹೈಕಮಾಂಡ್: ಬಿಎಸ್‍ವೈ

Public TV
2 Min Read
bs yediyurappa 1

ಬೆಂಗಳೂರು: ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ಆದರೆ ವಿಜಯೇಂದ್ರನ ವಿಚಾರದಲ್ಲಿ ಹೈಕಮಾಂಡ್‌ ತಿರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದರು. ಆದರೆ ನಿಲ್ಲೋದಿಲ್ಲ, ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದೆ. ನಿನ್ನೆ ಅಲ್ಲಿಯ ಜನ ಒತ್ತಾಯ ಮಾಡಿದ ಕಾರಣ ನಾನು ಹಾಗೆ ಹೇಳಿದ್ದೇನೆ. ಆದರೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿ ಅಂತಿಮ ತೀರ್ಮಾನವನ್ನು ಮಾಡುತ್ತಾರೆ. ಪಕ್ಷದ ತೀರ್ಮಾನವೇ ಅಂತಿಮವಾಗುತ್ತದೆ. ನಿನ್ನೆ ಹೇಳಿದ್ದು, ನನ್ನ ಸಲಹೆ ಅಷ್ಟೇ ಎಂದರು.

yediyurappa and Vijayendra 1

ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಒಂದು ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ.  ಎಂದರು.

ಕುಟುಂಬ ರಾಜಕೀಯದ ಆಗೋದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೋದಿ ಹೇಳಿದ್ದಾರೆ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ನನ್ನ ಮಗ ಸ್ಪರ್ಧಿಸುತ್ತಾನೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ನನಗೆ ಪಕ್ಷದಲ್ಲಿ ಸಾಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರಮಟ್ಟದಲ್ಲಿ ಬೆಳೆಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ ತ್ಯಾಗ ಮಾಡಿಲ್ಲ, ಅವರನ್ನ ಪಕ್ಷದಿಂದ ದಬ್ಬಿದ್ರು: ಸಿಎಂ ಇಬ್ರಾಹಿಂ

BJP FLAG

ಪಿಎಸ್‍ಐ ಹಗರಣದಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರ ಮೇಲೆ ಯಡಿಯೂರಪ್ಪ ಗರಂ ಆದರು. ಇದು ಮೂರ್ಖತನದ ಪರಮಾವಧಿ ಹೇಳಿಕೆ ಇದ್ದಾಗಿದ್ದು, ಇಂತಹ ಹೇಳಿಕೆಯನ್ನು ವಾಪಸ್ ಪಡೆಯಬೇಕು. ತಾ ನಂಬ, ಪರರು ಕಳ್ಳ ಗಾದೆ ಮಾತು ಹೇಳಿದರು.

ಪಕ್ಷದಲ್ಲಿ ನನ್ನ ಮೂಲೆಗುಂಪು ಮಾಡಲಾಯ್ತು ಎನ್ನೋದು ಸತ್ಯಕ್ಕೆ ದೂರವಾದ ಮಾತಾಗಿದೆ. ನನಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಪುರಸಭೆ ಸದಸ್ಯನಾಗಿದ್ದವನನ್ನು ನಾಲ್ಕು ಬಾರಿ ಸಿಎಂ ಮಾಡಿದೆ. ನಾನು ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಕಟ್ಟುತ್ತೇನೆ. 140ಕ್ಕೂ ಹೆಚ್ಚು ಸೀಟು ಗೆಲ್ಲಿಸಿಕೊಂಡು ಬರುತ್ತೇವೆ ಎಂದ ಅವರು ಒಬ್ಬ ಸಾಮಾನ್ಯ ಕಾರ್ಯಕರ್ತ ಯಡಿಯೂರಪ್ಪನನ್ನು ಪಕ್ಷ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಸಿದೆ. ನಾನು ಸಂತೃಪ್ತಿಯಿಂದ ಇದ್ದೇನೆ, ಸಮಾಧಾನದಿಂದ ಇದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್

I2U2 narendra modi

ಮೋದಿ ಮೊತ್ತೊಮ್ಮೆ ಪ್ರಧಾನಿ ಆಗಬೇಕು. ಅದನ್ನು ನಾನು ನೋಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ 140 ಸ್ಥಾನ ಗೆಲ್ಲೋದೆ ನಮ್ಮ ಗುರಿಯಾಗಿದೆ. ನಾನು ನಾಳೆ ನಾಡಿದ್ದರಿಂದಲೇ ಕೆಲಸ ಶುರು ಮಾಡುತ್ತೇನೆ ಎಂದು ಭರವಸೆ ನೀಡಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *