ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್

Public TV
1 Min Read
ADITI RAO 1 2

ಬಾಲಿವುಡ್‌ನ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾಗಿರುವ ಸಂಜಯ್ ಲೀಲಾ ಬನ್ಸಾಲಿ `ಗಂಗೂಬಾಯಿ ಕಾಥಿಯಾವಾಡಿ’ ಸಕ್ಸಸ್ ನಂತರ `ಹೀರಾಮಂಡಿ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಬಹುಭಾಷಾ ನಟಿ ಅದಿತಿ ರಾವ್ ಇದೀಗ ಈ ಚಿತ್ರತಂಡ ಸೇರಿಕೊಂಡಿದ್ದಾರೆ.

sanjay leelaಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸುವುದರಲ್ಲಿ ನಿರ್ದೇಶಕ ಸಂಜಯ್ ಲೀಲಿ ಬನ್ಸಾಲಿ ಯಾವಾಗಲೂ ಮುಂದು. ರಾಮ್ ಲೀಲಾ, ಪದ್ಮಾವತ್, ಬಾಜಿರಾವ್ ಮಸ್ತಾನಿ, ಬಿಟೌನ್‌ನಲ್ಲಿ ಹವಾ ಸೃಷ್ಟಿಸಿದ ನಿರ್ದೇಶಕ ಈಗ ಹೀರಾ ಮಂಡಿ ಚಿತ್ರದ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರಮುಖ ಪಾತ್ರದಲ್ಲಿ ಫರ್ದೀನ್ ಖಾನ್‌ಗೆ ನಾಯಕಿಯಾಗಿ ಅದಿತಿ ರಾವ್ ಹೈದರಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಸಿನಿಮಾರಂಗಕ್ಕೆ ಗುಡ್ ಬೈ: ರಾಜಕೀಯ ಅಖಾಡಕ್ಕೆ ರಶ್ಮಿಕಾ ಮಂದಣ್ಣ

aditi rao 1

ಸಿನಿಮಾ ರಿಲೀಸ್‌ಗೂ ಮುನ್ನವೇ ಸಾಕಷ್ಟು ನಿರೀಕ್ಷೇ ಹುಟ್ಟು ಹಾಕಿರುವ ಬನ್ಸಾಲಿ ನಿರ್ದೇಶನದ ಈ ಚಿತ್ರದಲ್ಲಿ ಮೊದಲ ಬಾರಿಗೆ ಫರ್ದೀನ್ ಖಾನ್ ಮತ್ತು ಅದಿತಿ ರಾವ್ ಕಾಣಿಸಿಕೊಳ್ತಿದ್ದಾರೆ. ಈ ಹೊಸ ಜೋಡಿ ಬನ್ಸಾಲಿ ಚಿತ್ರದಲ್ಲಿ ಹೇಗೆ ಮೋಡಿ ಮಾಡಬಹುದು ಅಂತಾ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *