ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ವೈ ಹುಣಸೇನಹಳ್ಳಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲೇ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗುತ್ತಿದೆ.
ವೈ ಹುಣಸೇನಹಳ್ಳಿಯ ರೈಲ್ವೆ ನಿಲ್ದಾಣದ ಬಳಿಯ ತುಸು ದೂರದಲ್ಲೇ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನ ನಾರಾಯಣದಾಸರಹಳ್ಳಿ ನಿವಾಸಿ ನರಸಿಂಹಮೂರ್ತಿ(40) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಖಾಸಗಿ ಶಾಲೆಯ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹದ ಬಳಿ ಮೊಬೈಲ್ ಫೋನ್ ಹಾಗೂ ಬೈಕ್ ಸಹ ಪತ್ತೆಯಾಗಿದೆ. ಇದನ್ನೂ ಓದಿ: ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ
ಮೃತದೇಹದ ತಲೆ ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರತರನಾದ ಗಾಯಗಳಾಗಿದ್ದು, ಸಾಕಷ್ಟು ಅನುಮಾನಗಳನ್ನ ಮೂಡಿಸುತ್ತಿವೆ. ಯಾರೋ ಉದ್ದೇಶಪೂರ್ವಕವಾಗಿ ಕೊಲೆ ಮಾಡಿ ರೈಲಿನ ಹಳಿ ಮೇಲೆ ಎಸೆದಿರುವ ರೀತಿಯಲ್ಲಿ ಕುರುಹುಗಳು ಕಾಣುತ್ತಿದೆ.
ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಸಿಪಿಐ ಧರ್ಮೇಗೌಡ ಹಾಗೂ ಗ್ರಾಮಾಂತರ ಠಾಣಾ ಪಿಎಸ್‍ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಸ್‍ಪಿ ಡಿ.ಎಲ್.ನಾಗೇಶ್ ಸಹ ಭೇಟಿ ನೀಡಿದ್ದಾರೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ