ಬೆಂಗಳೂರು: ಮುಂದಿನ 5 ದಿನವೂ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಕ್ಕೆ ಇಂದು ಯೆಲ್ಲೋ ಅಲರ್ಟ್ ಇದ್ದು, ನಾಳೆಯಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಬಹುತೇಕ ಕಡೆ ಮಳೆ ಸುರಿಯುವ ಸಾಧ್ಯತೆ ಇದ್ದು, ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 5ನೇ ದಿನ ಬೀದರ್ ಜಿಲ್ಲೆಗೆ ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದ್ದು, ನಾಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಗುಡುಗು ಮಿಂಚು ಸಹಿತ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಹಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: 5G ಹರಾಜು ಮುಕ್ತಾಯ – 1.5 ಲಕ್ಷ ಕೋಟಿ ತಲುಪಿದ ಒಟ್ಟು ಬಿಡ್ ಮೊತ್ತ
ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ 1 ಕಡೆ ಹಾಗೂ ದಕ್ಷಿಣ ಒಳನಾಡಿನ 5 ಕಡೆ ಭಾರೀ ಮಳೆ ದಾಖಲಾಗಿದೆ. ಉತ್ತರ ಒಳನಾಡಿನ ಗದಗ ಜಿಲ್ಲೆಯಲ್ಲಿ 7 ಸೆ.ಮೀ, ದಕ್ಷಿಣ ಒಳನಾಡಿನ ಹೊಸಕೋಟೆ, ಸಂಪಾಜೆಯಲ್ಲಿ 11 ಸೆ.ಮೀ, ಭಾಗಮಂಡಲ 9 ಸೆ.ಮೀ, ನಾಪೋಕ್ಲುವಿನಲ್ಲಿ 8 ಸೆ.ಮೀ, ಮೂಡಬಾಗಿಲು 7 ಸೆ.ಮೀ ಮಳೆ ದಾಖಲಾಗಿದೆ.