ಧಾರವಾಡ: ದೇಶದಲ್ಲಿ ಕರ್ನಾಟಕವೂ ಸೇರಿ ಹಲವು ರಾಜ್ಯಗಳಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಬಹುತೇಕ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳ ಕೈವಾಡವೇ ಇದೆ. ಆದ್ದರಿಂದ ಈ ಸಂಘಟನೆಗಳನ್ನು ಬ್ಯಾನ್ ಮಾಡದೇ ಹೋದಲ್ಲಿ ಆ ಸಂಘಟನೆಗಳ ಕಾರ್ಯಕರ್ತರನ್ನು ನಾವೇ ನುಗ್ಗಿ ಹೊಡೆಯಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳು ಅಶಾಂತಿ ಸೃಷ್ಟಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ
ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್ – ಮಂಡ್ಯದಲ್ಲೊಂದು ಮರ್ಡರ್ ಮಿಸ್ಟ್ರಿ
ಈ ಎರಡೂ ಸಂಘಟನೆಯವರು ಭಾರತವನ್ನು 2047ಕ್ಕೆ ಇಸ್ಲಾಮೀಕರಣಗೊಳಿಸುವ ಉದ್ದೇಶ ಹೊಂದಿದ್ದಾರೆ. ಕೇರಳ ರಾಜ್ಯದ ಮುಖ್ಯಮಂತ್ರಿ ಪೀಣರಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಅಚ್ಯುತನ್ ಇಬ್ಬರೂ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಈ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಒತ್ತಾಯ ಮಾಡಿತ್ತು. ಈಗ ಇದೇ ಪಕ್ಷ ಅಧಿಕಾರದಲ್ಲಿದ್ದು, ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]