ಹಳಿ ತಪ್ಪಿದ 8 ಬೋಗಿಗಳು- ರೈಲು ಸಂಚಾರಕ್ಕೆ ಅಡ್ಡಿ

Public TV
1 Min Read
train

ನವದೆಹಲಿ: ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.

ಗೂಡ್ಸ್ ರೈಲು ದೆಹಲಿಯ ಶಕುರ್ ಬಸ್ತಿಯಿಂದ ರೋಹ್ಟಕ್ ಮೂಲಕ ಸೂರತ್‍ಗಡಕ್ಕೆ ಹೋಗುತ್ತಿತ್ತು. ಅದರಲ್ಲಿ ಕಲ್ಲಿದ್ದಲು ತುಂಬಲಾಗಿತ್ತು. ಆದರೆ ಹರಿಯಾಣದಲ್ಲಿ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಇದಾದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

train 1

ಘಟನೆ ಸಂಬಂಧಿಸಿ ರೈಲ್ವೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಅಪಘಾತದ ಕಾರಣವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಭವಿಸಿದ ರೈಲು ಹಳಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಆದರೆ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ – 5 ದಿನ ಇಂಟರ್‌ನೆಟ್ ಸ್ಥಗಿತ

ಈ ಬಗ್ಗೆ ಈಶಾನ್ಯ ರೈಲ್ವೆ ಟ್ವೀಟ್ ಮಾಡಿದ್ದು, ಉತ್ತರ ರೈಲ್ವೆಯ ದೆಹಲಿ ವಿಭಾಗದ ಖರವಾಡ್ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಕಾರಣ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಚಿಕೆಯಾಗಬೇಕು: ಜಗದೀಶ್ ಶೆಟ್ಟರ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *