ಭೋಪಾಲ್: ಮಧ್ಯಪ್ರದೇಶದ ಕೆಲವು ಗ್ರಾಮಗಳಲ್ಲಿ ಹೊಸದಾಗಿ ಮಹಿಳಾ ಪಂಚಾಯತ್ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಆದರೆ ಚುನಾಯಿತ ಮಹಿಳೆಯರು ಪ್ರಮಾಣ ವಚನ ಸ್ವೀಕರಿಸದೇ ಅವರ ಪುರುಷ ಸಂಬಂಧಿಗಳಿಗೆ ಪ್ರಮಾಣ ವಚನ ಬೋಧಿಸಲಾಗಿದೆ.
ಸಾಗರ್ ಹಾಗೂ ದಾಮೋಹ್ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಚುನಾಯಿತ ಮಹಿಳೆಯರ ತಂದೆ ಹಾಗೂ ಪತಿ ಸೇರಿದಂತೆ ಪುರುಷ ಸಂಬಂಧಿಗಳು ಪ್ರಮಾಣ ವಚನ ಸ್ವೀಕರಿಸಿದ್ದು, ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವೀಡಿಯೋ ಹೊರಬೀಳುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ಸಾಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಚುನಾಯಿತ ಮಹಿಳೆಯರ ಪತಿ, ತಂದೆ, ಸೋದರ ಮಾವ ಸೇರಿದಂತೆ ಪುರುಷ ಸಂಬಂಧಿಕರಿಗೆ ಪ್ರಮಾಣ ವಚನ ಬೋಧಿಸಿದ ಆರೋಪದ ಮೇಲೆ ಜೈಸಿನಗರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆಶಾರಾಮ್ ಸಾಹು ಅವರನ್ನು ಅಮಾನತುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್ ರಾಜ್ ಪ್ರಶ್ನೆ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಶಾರಾಮ್ ಸಾಹು, ಚುನಾಯಿತ ಮಹಿಳೆಯರು ಪ್ರಮಾಣ ವಚನ ಸ್ವೀಕಾರದ ಕಾರ್ಯಕ್ರಮಕ್ಕೆ ಹಾಜರಾಗುವಲ್ಲಿ ವಿಳಂಬವಾಗಿತ್ತು. ಅವರಿಗೆ ಮತ್ತೆ ಹಾಜರಾಗುವಂತೆ ಸೂಚನೆಯನ್ನೂ ನೀಡಲಾಗಿತ್ತು. ಆದರೆ ಕೊನೆಯಲ್ಲಿ ಅವರ ಪರವಾಗಿ ಅವರ ಕುಟುಂಬದ ಸದಸ್ಯರಿಗೆ ಪ್ರಮಾನವಚನ ಸ್ವೀಕರಿಸಲು ಅವಕಾಶ ನೀಡಲಾಯಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ
ಜೈಸಿನಗರ ಗ್ರಾಮ ಪಂಚಾಯಿತಿಯಲ್ಲಿ ಚುನಾಯಿತರಾದ 10 ಮಹಿಳೆಯರಲ್ಲಿ ಒಬ್ಬರ ತಂದೆ, ಇಬ್ಬರ ಗಂಡಂದಿರು ಮತ್ತು ಇನ್ನೊಬ್ಬ ಮಹಿಳೆಯ ಸೋದರ ಮಾವ ಚುನಾಯಿತ ಸದಸ್ಯರ ಬದಲಿಗೆ ಪ್ರಮಾಣವಚನ ಸ್ವೀಕರಿಸಿದರು ಎಂದು ಮೂಲಗಳು ತಿಳಿಸಿವೆ.