ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

Public TV
2 Min Read
KARNATAKA HIGHCOURT

ಬೆಂಗಳೂರು/ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಭ್ರಷ್ಟ್ರಾಚಾರ ಪ್ರಕರಣಗಳ ತನಿಖೆಗಾಗಿ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಇಂದು ಕರ್ನಾಟಕ ಹೈಕೋರ್ಟ್ ರದ್ದುಪಡಿಸುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ಅಲ್ಲದೇ ಎಸಿಬಿ ಮುಂದಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಿದೆ.

KARNATAKA HIGHCOURT 2

ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನ ಸಮುದಾಯ ಮತ್ತು ವಕೀಲ ಬಿ.ಜಿ.ಚಿದಾನಂದ ಅರಸ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಎಚ್.ಎಸ್.ಹೇಮಲೇಖಾ ಅವರಿದ್ದ ದ್ವೀಸದಸ್ಯ ಪೀಠವು ಎತ್ತಿ ಹಿಡಿದಿದೆ. ಇದನ್ನೂ ಓದಿ: ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

siddaramaiah 4

2016ರ ಮಾರ್ಚ್ 14ರಂದು ಎಸಿಬಿ ರಚಿಸಲು ಮಾಡಿರುವ ಕಾರ್ಯಾದೇಶವನ್ನು ರಾಜ್ಯ ಸರ್ಕಾರ ಸರಿಯಾಗಿ ಮಾಡಿಲ್ಲ. ಅಲ್ಲದೆ ಲೋಕಾಯುಕ್ತ ತನಿಖೆಗೆ ಸಂಬಂಧಿಸಿದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿರುವ ಸೂಚನೆಯ ಬಗ್ಗೆಯೂ ಸರಿಯಾದ ಕ್ರಮವಿಲ್ಲ. ಹಾಗಾಗಿ ಹಿಂದಿನ ಅಧಿಸೂಚನೆಗಳನ್ನು ಸೂಪರ್ ಸೀಡ್ ಮಾಡಿ ಹೊರಡಿಸಿರುವ ಎಸಿಬಿಯನ್ನು ವಜಾ ಮಾಡಲಾಗಿದೆ ಎಂದು ಪೀಠವು ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಅದ್ಧೂರಿ ಬರ್ತ್‌ಡೇ ಸೆಲಬ್ರೇಷನ್‌ಗೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ

court file

ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶಗಳನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಎಸಿಬಿ ರದ್ದಾಗಿದೆ. ಆದರೆ ಎಸಿಬಿ ಮುಂದೆ ಬಾಕಿ ಇರುವ ತನಿಖೆ, ವಿಚಾರಣೆ, ಶಿಸ್ತುಕ್ರಮ ಪ್ರಕ್ರಿಯೆಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿವೆ. ಹೀಗಾಗಿ ಎಸಿಬಿ ಮುಂದಿರುವ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗವಣೆಯಾಗಿರುವುದರಿಂದ ಆರೋಪಿಗಳು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದೂ ಹೇಳಿದೆ.

ಅಲ್ಲದೇ, 1991ರ ಫೆಬ್ರವರಿ 6, 2002ರ ಫೆಬ್ರವರಿ 8, 2002ರ ಮೇ 8, 2002ರ ಡಿಸೆಂಬರ್ 5ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವ ಸಂಬಂಧ ಹೊರಡಿಸಿದ್ದ ಆದೇಶಗಳನ್ನು ಪುನರ್ ಸ್ಥಾಪಿಸಲಾಗಿದೆ ನ್ಯಾಯಪೀಠ ಸ್ಪಷ್ಟವಾಗಿ ಉಲ್ಲೇಖಿಸಿದೆ. ಇದನ್ನೂ ಓದಿ: ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

court order law

ಚಾರಿತ್ರ್ಯವಂತರನ್ನು ನೇಮಿಸಿ- ಖಡಕ್ ಸೂಚನೆ: ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಕಾಯ್ದೆಗಳನ್ನು ಗಮನದಲ್ಲಿಟ್ಟುಕೊಂಡು ಸೆಕ್ಷನ್ 3(2)ಎ ಮತ್ತು 3(2)ಬಿ ಅಡಿ ಸಮರ್ಥರನ್ನು ನೇಮಕ ಮಾಡಬೇಕು. ಸಾರ್ವಜನಿಕ ಬದುಕಿನಲ್ಲಿಯೂ ಉತ್ತಮ ಹಿನ್ನೆಲೆಯುಳ್ಳವರು, ಪ್ರಾಮಾಣಿಕರು ಹಾಗೂ ನ್ಯಾಯಯುತವಾಗಿ ನಡೆದುಕೊಳ್ಳುವವರನ್ನು ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಲು ಶಿಫಾರಸು ಮಾಡಬೇಕು ಎಂದು ಸಾಂವಿಧಾನಿಕ ಪ್ರಾಧಿಕಾರಗಳಿಗೆ ಮನವಿ ಮಾಡುತ್ತೇವೆ ಎಂದು ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಪೀಠದ ಶಿಫಾರಸ್ಸು:

  • ಕರ್ನಾಟಕ ಲೋಕಾಯುಕ್ತ ಕಾಯ್ದೆ ಸೆಕ್ಷನ್ 12(4)ಕ್ಕೆ ತುರ್ತಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ.
  • ಉತ್ತಮ ಹಿನ್ನೆಲೆ ಹೊಂದಿರುವ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ನೇಮಕ ಮಾಡುವ ಮೂಲಕ ಅದನ್ನು ಸದೃಢಗೊಳಿಸಬೇಕು.
  • ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿಯೋಜಿಸಿರುವ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ವರ್ಗಾಯಿಸಬೇಕು. ಎಸಿಬಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯು ಲೋಕಾಯುಕ್ತದ ಆಡಳಿತಕ್ಕೆ ಒಳಪಡಲಿದ್ದಾರೆ.
  • ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಅನುಮತಿ ಪಡೆಯದೇ ಕನಿಷ್ಠ 3 ವರ್ಷ ಸೇವಾವಧಿ ಪೂರ್ಣಗೊಳಿಸದ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಲೋಕಾಯುಕ್ತದಿಂದ ವರ್ಗಾಯಿಸುವಂತಿಲ್ಲ.
  • ಒಂದು ಸಾರಿ ತನಿಖೆ ಆರಂಭಿಸಿದ ಬಳಿಕ ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ತುರ್ತಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *