ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸ್ತೇವೆ: ಗೋಪಾಲಯ್ಯ

Public TV
1 Min Read
Gopalaiah e1676799430326

ಹಾಸನ: ಬಸವರಾಜ ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೊದಲು ತಮ್ಮ ಪಕ್ಷದಲ್ಲಿ ಆಗುತ್ತಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳಲಿ. ನಂತರ ಗೆಲ್ಲುವ ಮಾತನಾಡಲಿ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೀವಿ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಫ್ಘಾನ್‌ನಲ್ಲಿ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನ ಭಾರತ ಪೂರ್ಣಗೊಳಿಸಬೇಕು – ಅಬ್ದುಲ್ ಕಹರ್ ಬಾಲ್ಕಿ

Gopalaiah 1

ಬಿಜೆಪಿ ಮೂರು ಹೋಳಾಗಿದ್ದಾಗಲೇ 120 ಸೀಟ್ ತೆಗೆದುಕೊಂಡಿದ್ದೇವೆ, ಕಾಂಗ್ರೆಸ್ 5 ವರ್ಷ ಅಧಿಕಾರ ಮಾಡಿ ಯಾಕೆ ಮತ್ತೆ ಅಧಿಕಾರಕ್ಕೆ ಬರಲಿಲ್ಲ, ಎಷ್ಟು ಸೀಟ್ ಗೆದ್ದರು? ಉತ್ತಮ ಕೆಲಸ ಮಾಡಿದ್ದೀವಿ, ಅನ್ನಭಾಗ್ಯ, ಶಾದಿಭಾಗ್ಯ ಜಾರಿಗೆ ತಂದಿದ್ದೇವೆ ಅನ್ನೋರನ್ನ ಯಾಕೆ ಈ ರಾಜ್ಯದ ಜನ ತಿರಸ್ಕಾರ ಮಾಡಿದ್ರು? ಕಾಂಗ್ರೆಸ್ ಏಕೆ 79 ಸೀಟ್ ತೆಗೆದುಕೊಂಡರು. ಇದಕ್ಕೆ ಉತ್ತರ ಕೊಡಬೇಕು ಎಂದು ಕುಟುಕಿದ್ದಾರೆ.

Gopalaiah 2

ಬಿಜೆಪಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ಈಗಾಗಲೇ ಮಾಜಿ ಶಾಸಕ ಸುರೇಶ್‌ಗೌಡ ಅವರಿಗೆ ರಾಜ್ಯದ ಅಧ್ಯಕ್ಷರು ಅವರಿಗೆ ಸೂಚನೆ ಕೊಟ್ಟಿದ್ದಾರೆ. ಮತ್ತೆ ಅವರು ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: Bigg Boss: ಮೂಡ್ ಇಲ್ಲ ಅಂದ್ರೆ ಮೂರು ದಿನ ಸ್ನಾನ ಮಾಡಲ್ಲ: ಸೋನು ಶ್ರೀನಿವಾಸ್ ಗೌಡ

independence day basavaraj bommai

ನಾವೆಲ್ಲರೂ ಸರ್ಕಾರದ ಒಂದು ಭಾಗವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಏನಾದ್ರು ಸಣ್ಣಪುಟ್ಟ ಸಮಸ್ಯೆ ಇದ್ದರೆ 4 ಗೋಡೆ ಮಧ್ಯೆ ಕುಳಿತು ಬಗೆಹರಿಸಿಕೊಳ್ಳುತ್ತೇವೆ. ಬಿಜೆಪಿ ಪಕ್ಷ ಇಡೀ ರಾಷ್ಟ್ರದಲ್ಲೇ ಒಂದು ದೊಡ್ಡ ಪಕ್ಷ, ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವನ್ನು ಇಡೀ ವಿಶ್ವ ನೋಡುತ್ತಿದೆ. ನಾವೂ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮತ್ತೆ ನಾವೇ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Live Tv

[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *