ಅಮರಾವತಿ: ಟಿಆರ್‌ಎಸ್ ಸರ್ಕಾರದ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ಅಲ್ಲಿನ ಪ್ರದೇಶವನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ರಾಯಚೂರಿನ ಜನರು ಹತ್ತಿರದಲ್ಲಿದ್ದೀರಿ. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಯೋಜನೆಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಹೇಳಬೇಕು ಎಂದರು.
ಇದೇ ಸಂದರ್ಭದಲ್ಲಿ ಅವರು ತಮ್ಮ ಉಚಿತ ಕುಡಿಯುವ ನೀರು, ಮಿಷನ್ ಭಗೀರಥ, ಗರ್ಭಿಣಿಯರಿಗೆ ಕೆಸಿಆರ್ ಕಿಟ್‍ಗಳಂತಹ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಹಾಲುಣಿಸುವ ತಾಯಂದಿರು, ಉಚಿತ ವಿದ್ಯುತ್, ಎಕರೆಗೆ ವಾರ್ಷಿಕ 10,000 ರೂ. ನೀಡುವ ಯೋಜನೆಗಳನ್ನು ಕೊಂಡಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಎದುರು ಯಡಿಯೂರಪ್ಪ ಮಾಸ್ ಇಮೇಜ್ ಅಸ್ತ್ರ – ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ ಹಿಂದಿನ ಪ್ಲಾನ್ ಏನು?
ಕೆಸಿಆರ್ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಅವರು ಈ ಹಿಂದೆಯೂ ಇಂತಹ ಅನೇಕ ಹೇಳಿಕೆಗಳನ್ನು ನೀಡಿದ್ದರು. ನಾಂದೇಡ್‍ನಂತಹ ಮಹಾರಾಷ್ಟ್ರದ ಕೆಲವು ಗಡಿ ಪ್ರದೇಶಗಳನ್ನು ಉಲ್ಲೇಖಿಸಿ, ಮತದಾರರು ಬುದ್ಧಿವಂತಿಕೆಯಿಂದ ಯೋಚಿಸುವಂತೆ ಕರೆ ನೀಡಿದ್ದರು. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ