ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಪಕ್ಷದವರೇ ಹೊರತು ಬಿಜೆಪಿಯವರಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪ ಹೊರಿಸಿ ಪ್ರಚಾರ ಗಿಟ್ಟಿಸಲು ಮುಂದಾಗಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ ಪಕ್ಷದವನೇ ಎಂದು ಈಗಾಗಲೇ ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದು 1,573 ಕೇಸ್, 3 ಸಾವು – ಏಕೈಕ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ
ಟಿಪ್ಪು ಜಯಂತಿ ಮೂಲಕ ಹಿಂದೂಗಳ ಭಾವನೆ ಕೆರಳಿಸಿದ ಕುಖ್ಯಾತಿ ಸಿದ್ದರಾಮಯ್ಯ ಅವರದ್ದು. ಸಿದ್ದರಾಮಯ್ಯ ವಿರುದ್ಧ ಕೊಡಗಿನ ಜನರ ಮನೆಮನೆಯಲ್ಲೂ ಆಕ್ರೋಶ ಇದೆ. ಆದ್ದರಿಂದಲೇ ಅವರ ಕೊಡಗು ಭೇಟಿ ಸಂದರ್ಭ ಬಿಜೆಪಿ ಕಾರ್ಯಕರ್ತರು ಪ್ರಜಾಪ್ರಭುತ್ವದ ಹಕ್ಕಿನ ರೀತಿಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮೊಟ್ಟೆ ಎಸೆಯುವ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮುಂದಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]