ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಧಿಕಾರಿ ಗುರುಲಿಂಗಸ್ವಾಮಿ ಹೋಳಿಮಠ ಅವರ ಹಠತ್ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಕಂಬನಿ ಮಿಡಿದಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಆತ್ಮೀಯರಾಗಿದ್ದ ಅವರು ಚಿಕ್ಕವಯಸ್ಸಿನಲ್ಲೇ ವಿವಿಧ ಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡಿ ಮಾಧ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ನಿಧನ
ನನ್ನ ಅತ್ಮೀಯ ಪತ್ರಕತರಲ್ಲಿ ಒಬ್ಬಬರಾಗಿದ್ದ ಅವರು ನಿಷ್ಪಕ್ಷಪಾತ ಹಾಗೂ ವಸ್ತುನಿಷ್ಠ ಸುದ್ದಿಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದರು. ಒಬ್ಬ ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಿ, ಪತ್ನಿ, ಮಕ್ಕಳು ಹಾಗೂ ಕುಟುಂಬ ವರ್ಗದವರಿಗೆ ದುಃಖಭರಿಸುವ ಶಕ್ತಿಯನ್ನು ಕೊಡಲಿ ಎಂದು ನಿರಾಣಿಯವರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು