ನವದೆಹಲಿ: ರಾಹುಲ್ ಗಾಂಧಿ ಅವರನ್ನು ಬಲವಂತವಾಗಿ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ನಾಯಕ ದಿಗ್ವಿಜಯ ಸಿಂಗ್ ತಿಳಿಸಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮನಸ್ಸನ್ನು ಬದಲಾಯಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು, ರಾಹುಲ್ ಗಾಂಧಿ ಇನ್ನು ಮುಂದೆ ಪಕ್ಷವನ್ನು ಮುನ್ನಡೆಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್ ಅಮಾನತು
ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನಿಂದಾಗಿ 2019ರಲ್ಲಿ ತ್ಯಜಿಸಿದ ಹುದ್ದೆಗೆ ಮರಳಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ಸೆಪ್ಟೆಂಬರ್ 20 ರೊಳಗೆ ಕಾಂಗ್ರೆಸ್ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಬೇಕಾಗಿದೆ. ಈ ವಾರದ ನಂತರ ವೇಳಾಪಟ್ಟಿಯನ್ನು ಪ್ರಕಟಿಸಬಹುದು.
ಗೆಹ್ಲೋಟ್ ಅವರು ಮಾಡಿದ ಮನವಿ ಎಲ್ಲರಿಗೂ ತಿಳಿದಿದೆ. ಅದು ರಾಹುಲ್ ಗಾಂಧಿಯ ಮೇಲೆ ಅವಲಂಬಿತವಾಗಿದೆ. ಅವರನ್ನು ಹೇಗೆ ಬಲವಂತ ಮಾಡುತ್ತೀರಿ? ನಾವು ಎಲ್ಲರನ್ನೂ ಮಂಡಳಿಗೆ ಸೇರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕು. ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಬೇಕು ಎಂದು ಗೆಹ್ಲೋಟ್ ಮನವಿ ಮಾಡಿದ್ದರು.