ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿದ್ದಾರೆ. ತಾಯಿಯ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿಮಾನ ಹತ್ತಲಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ
ಯಾವುದೇ ನಿರ್ದಿಷ್ಟ ಪ್ರಯಾಣದ ದಿನಾಂಕ ಅಥವಾ ಅವರ ಭೇಟಿಯ ಸ್ಥಳಗಳನ್ನು ಅವರು ತಿಳಿಸಿಲ್ಲ. ಆದರೆ ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್‍ಯಾಲಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದ್ದು, ಸೆಪ್ಟೆಂಬರ್ 7 ರಿಂದ ಆರಂಭವಾಗಲಿದೆ. ಈ ದೊಡ್ಡ ಕಾರ್ಯಕ್ರಮಕ್ಕೆ ಪಕ್ಷ ತಯಾರಿ ನಡೆಸುತ್ತಿವಾಗಲೇ ತಾಯಿಯ ಜೊತೆ ರಾಹುಲ್, ಪ್ರಿಯಾಂಕಾ ಗಾಂಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.