ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ.
ಕಳೆದರೆಡು ದಿನಗಳಿಂದ ಬಿಟ್ಟು, ಬಿಟ್ಟು ಸುರಿಯುತ್ತಿದ್ದ ಮಳೆ, ಇಂದು ಮುಂಜಾನೆಯಿಂದಲೇ ವರುಣ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಅಕ್ಟೋಬರ್ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ
ಮತ್ತೊಂದೆಡೆ ಕರಾವಳಿ ಜಿಲ್ಲೆಯ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು