ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ರಕ್ಷಿಸಲಾಗಿದೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊರಾದಾಬಾದ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಸೋನಾಲಿ ಫೋಗಟ್ ದೇಹದ ಮೇಲೆ ಗಾಯದ ಗುರುತು ಪತ್ತೆ – ಇಬ್ಬರು ಸಹಚರರ ಬಂಧನ
ಮೂರು ಅಂತಸ್ತಿನ ಕಟ್ಟಡದಲ್ಲಿ ಒಂದೇ ಕುಟುಂಬದ ಸದಸ್ಯರು ವಾಸವಿದ್ದರು ಎಂಬುದು ಮಾಹಿತಿಯಿಂದ ತಿಳಿದುಬಂದಿದೆ.
ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ಸಂಪರ್ಕದಲ್ಲಿದ್ದ 34 ಜನರ ಬಂಧನ