ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ತನ್ನೊಂದಿಗೆ ಚಾಟ್ ಮಾಡುವುದನ್ನು ನಿಲ್ಲಿಸಿದ್ದಕ್ಕಾಗಿ ಮೂವರು ಯುವಕರು ಪ್ಲ್ಯಾನ್ ಮಾಡಿ 16 ವರ್ಷದ ಬಾಲಕಿಗೆ ಗುಂಡು ಹಾರಿಸಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಘಟನೆ ನಡೆದ ಎರಡು ದಿನಗಳ ನಂತರ ಮೂವರನ್ನು ಬಂಧಿಸಲಾಗಿದೆ. ತನ್ನೊಂದಿಗೆ ಸ್ನೇಹ ಬೆಳೆಸಿದ್ದ ಒಬ್ಬನ ಸಂದೇಶಗಳಿಗೆ ಬಾಲಕಿ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾಳೆ. ಅದಕ್ಕಾಗಿ ಆಕೆಯ ಮೇಲೆ ಹಲ್ಲೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮಹಿಳಾ ಮೀನು ವ್ಯಾಪಾರಿಗಳ ಶೆಡ್ ಧ್ವಂಸ – ಸ್ಥಳೀಯರ ಆಕ್ರೋಶ
ಬಾಲಕಿ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ನಂತರ ಆರೋಪಿ ಅರ್ಮಾನ್ ಅಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ಮತ್ತಿಬ್ಬರು ಆರೋಪಿಗಳಾದ ಬಾಬಿ ಹಾಗೂ ಪವನ್ ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅರ್ಮಾನ್ ಅಲಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ
ಅರ್ಮಾನ್ ಅಲಿ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮದ ಮೂಲಕ ಹುಡುಗಿಯೊಂದಿಗೆ ಸಂಪರ್ಕದಲ್ಲಿದ್ದನು. 6 ತಿಂಗಳ ಹಿಂದೆ ಹುಡುಗಿ ತನ್ನ ಸಂದೇಶಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ ನಂತರ ಅವನು ದಾಳಿಗೆ ಸಂಚು ರೂಪಿಸಿದ್ದಾನೆ. 11ನೇ ತರಗತಿ ಓದುತ್ತಿದ್ದ 16 ವರ್ಷದ ಬಾಲಕಿ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಸಂತ್ರಸ್ತೆಯ ಭುಜಕ್ಕೆ ಗುಂಡು ತಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಬಾಲಕಿಗೆ ಹಿಂದಿನಿಂದ ಗುಂಡು ಹಾರಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಯತ್ನ ಆರೋಪ ಹೊರಿಸಲಾಗಿದೆ.