ಭೋಪಾಲ್: ನಾಗ್ಪುರದ(Nagpur) ಜರಿಪಟ್ಕಾದ ಯುವತಿ ಮೇಲೆ ಅತ್ಯಾಚಾರವೆಸಗಿದ (Rape) 22 ವರ್ಷದ ಯುವಕ ಮತ್ತು ಇತರ ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಆಕೆಗೆ ಕಿರುಕುಳ ನೀಡಿದ ಆತನ ತಾಯಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಯುವತಿ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭೋಪಾಲ್ಗೆ ಬಂದಿದ್ದು, ಈ ವೇಳೆ ಆರೋಪಿ ಅಭಿಷೇಕ್ ಕುರಿಲ್ (Abhishek Kuril) ಅವರನ್ನು ಭೇಟಿಯಾಗಿದ್ದಳು. ಈ ವೇಳೆ ಪ್ರೀತಿ ನಾಟಕವಾಡಿ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ವಿದ್ಯುತ್ ಕಡಿತ – ಮೊಬೈಲ್ ಟಾರ್ಚ್ ಬಳಸಿ ವೈದ್ಯರಿಂದ ರೋಗಿಗೆ ಚಿಕಿತ್ಸೆ
ಆರೋಪಿಯ ತಾಯಿ 45 ವರ್ಷದ ರಜನಿ ವಿರುದ್ಧವೂ ದೂರು ದಾಖಲಿಸಲಾಗಿದ್ದು, ಯುವತಿಗೆ ಇತರ ಪುರುಷರೊಂದಿಗೆ ಲೈಂಗಿಕ ಸಂಬಂಧ(Physical Relationship) ಹೊಂದುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಯುವತಿಯ ಮೊಬೈಲ್ ಫೋನ್ ಕದ್ದು, ನಂತರ ಆಕೆಯ ಅಶ್ಲೀಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆರೋಪಿ ಅಪ್ಲೋಡ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಂಬಂಧ ತಾಯಿ ಮತ್ತು ಮಗನ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ